Loading..!

KPSC ಯಿಂದ ಗೆಜೆಟೆಡ್ ಪ್ರೊಬೇಷನರ್ಸ್(KAS) ಹುದ್ದೆಗಳ ಪೂರ್ವಭಾವಿ ಪರೀಕ್ಷಾ ದಿನಾಂಕ ಇದೀಗ ಪ್ರಕಟ
Published by: Yallamma G | Date:3 ಜೂನ್ 2024
Image not found

ಕರ್ನಾಟಕ ಲೋಕಸೇವಾ ಆಯೋಗವು (KPSC) 2023-2024 ನೇ ಸಾಲಿನ ಗೆಜೆ಼ಟೆಡ್ ಪ್ರೊಬೇಷನರ್ಸ್(KAS) 384 ಹುದ್ದೆಗಳಿಗೆ ರಂದು 26/02/2024 ರಂದು ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KAS ಹುದ್ದೆಗಳ ನೇಮಕಾತಿಗಳ ಮೊದಲ ಹಂತವಾದ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಿದೆ. 21 ಜುಲೈ 2024ರಂದು ಬೆಳಗ್ಗೆ 10ರಿಂದ 12ಗಂಟೆಯವರೆಗೂ ಪತ್ರಿಕೆ-1 ಮತ್ತು ಅದೇ ದಿನ ಮಧ್ಯಾಹ್ನ 2ರಿಂದ 4 ಗಂಟೆಯವರೆಗೂ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಡಾ. ರಾಕೇಶ್‌ಕುಮಾ‌ರ್ ಕೆ. ತಿಳಿಸಿದ್ದಾರೆ. ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.  
- ಅಭ್ಯರ್ಥಿಗಳು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Comments