Loading..!

KPSCಯಿಂದ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ
Published by: Bhagya R K | Date:21 ಡಿಸೆಂಬರ್ 2024
Image not found

ಕರ್ನಾಟಕ ಲೋಕಸೇವಾ ಆಯೋಗವು 2024-25 ನೇ ಸಾಲಿನ ಗೆಜೆಟೆಡ್ ಪ್ರೊಬೇಷನ‌ರ್ (KAS) ಗ್ರೂಪ್ - 'ಎ' ಮತ್ತು ಗ್ರೂಪ್- 'ಬಿ' ವೃಂದದ 384 ಹುದ್ದೆಗಳ ನೇಮಕಾತಿಗಾಗಿ 26/02/2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನೇಮಕಾತಿಯ ಮುಂದಿನ ಹಂತವಾದ ಪೂರ್ವಭಾವಿ ಪರೀಕ್ಷೆಯನ್ನು 2024 ಆಗಸ್ಟ್ 27 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಸಲಾಗಿತ್ತು ಆದರೆ ಪರೀಕ್ಷೆಯಲ್ಲಿ ಕನ್ನಡ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿರುವುದರಿಂದ ಅಭ್ಯರ್ಥಿಗಳಿಗೆ ತೊಂದರೆಯಾದಕಾರಣ KPSCಯು ದಿನಾಂಕ ಡಿಸೆಂಬರ್ 29 ರಂದು ಪೂರ್ವಭಾವಿ ಪರೀಕ್ಷೆಯನ್ನು ಮತ್ತೆ ನಡೆಸಲಿದೆ.
       
                   ಗೆಜೆಟೆಡ್ ಪ್ರೊಬೇಷನ‌ರ್ (KAS) ಹುದ್ದೆಗಳ ನೇಮಕಾತಿಯ ಪೂರ್ವಭಾವಿ (KAS Prelims)  ಪರೀಕ್ಷೆಗಳು ದಿನಾಂಕ 29-ಡಿಸೆಂಬರ್ 2024ರಂದು ನಡೆಯುತ್ತಿದ್ದು. ಕರ್ನಾಟಕ ಲೋಕಸೇವಾ ಆಯೋಗ(KPSC)ವು ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರವನ್ನು ಆಯೋಗದ ವೆಬ್ ಸೈಟ್ http://kpsc.kar.nic.in ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಹಾಗೂ ಸದರಿ ಪರೀಕ್ಷೆಯ ವೇಳಾಪಟ್ಟಿಯು ಆಯೋಗದ ವೆಬ್ ಸೈಟ್‌ನಲ್ಲಿ ಲಭ್ಯವಿರುತ್ತದೆ.


    ವಿಶೇಷ ಸೂಚನೆ:- ತಮ್ಮದೇ ಆದ ಲಿಪಿಕಾರರನ್ನು ಕರೆತರುವ ಅಂಗವಿಕಲ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದೊಂದಿಗೆ ಲಿಪಿಕಾರರ ಪ್ರವೇಶ ಪತ್ರವನ್ನು ಸಹ ಡೌನ್ ಲೋಡ್ ಮಾಡಿಕೊಳ್ಳತಕ್ಕದ್ದು.

Comments