ಕರ್ನಾಟಕ ಲೋಕಸೇವಾ ಆಯೋಗವು 2024-25 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ (KAS) ಗ್ರೂಪ್ - 'ಎ' ಮತ್ತು ಗ್ರೂಪ್- 'ಬಿ' ವೃಂದದ 384 ಹುದ್ದೆಗಳ ನೇಮಕಾತಿಗಾಗಿ 26/02/2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಪೂರ್ವಭಾವಿ ಪರೀಕ್ಷೆಯನ್ನು 29-ಡಿಸೆಂಬರ್ 2024ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗ(KPSC)ವು ಪರೀಕ್ಷೆಯ ಕೀ ಉತ್ತರಗಳನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಕೀ ಉತ್ತರಗಳನ್ನು ಜಾಲತಾಣದಲ್ಲಿ ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಬಹುದು. ಪ್ರಕಟಿಸಲಾದ ಸರಿ ಉತ್ತರಗಳಿಗೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 22-ಜನವರಿ-2025 ರಂದು ಸಂಜೆ 05:30 ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರತಿ ಪ್ರಶ್ನೆಗೆ ಆಕ್ಷೇಪಣೆಯನ್ನು ಸಲ್ಲಿಸಲು ₹50 ಶುಲ್ಕವನ್ನು (ಐ.ಪಿ.ಸಿ. ಅಥವಾ ಡಿ.ಡಿ. ಮೂಲಕ) ಕಾರ್ಯದರ್ಶಿಯವರು, ಕರ್ನಾಟಕ ಲೋಕಸೇವಾ ಆಯೋಗ, ಇವರ ಹೆಸರಿಗೆ ಸಂದಾಯ ಮಾಡಬೇಕು. ಒಂದು ವೇಳೆ ನಿಗದಿತ ಮಲ್ಕವನ್ನು ಪಾವತಿ ಮಾಡದಿದ್ದಲ್ಲಿ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Comments