ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುತ್ತಿರುವ 2023-24ನೇ ಸಾಲಿನ ಗ್ರೂಪ್ ಎ ಮತ್ತು ಬಿ ವೃಂದದ 384 ಗೆಜೆಟೆಡ್ ಪ್ರೊಬೆಷನರ್ಸ್ (KAS) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2024 ಡಿಸೆಂಬರ್ 29 ರಂದು ನಡೆದ ಪೂರ್ವಭಾವಿ ಮರುಪರೀಕ್ಷೆ ಮೇಲಿನ ತಕರಾರುಗಳು ಮುಂದುವರಿದಿವೆ. ಕರ್ನಾಟಕ ಆಡಳಿತ ನ್ಯಾಯಮಂಡಳಿ (KAT) ಮುಖ್ಯ ಪರೀಕ್ಷೆ ಅಧಿಸೂಚನೆಯನ್ನು ತಡೆಯಲು ಆದೇಶಿಸಿದೆ.
ಈ ಹುದ್ದೆಗಳ ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ಪವಿತ್ರಾ ಮತ್ತು ಇತರ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿದ ನ್ಯಾಯಾಂಗ ಸದಸ್ಯ ಎಸ್. ವೈ. ವಟವಟಿ ಮತ್ತು ಆಡಳಿತ ಸದಸ್ಯೆ ಡಾ. ಅಮಿತಾ ಪ್ರಸಾದ್ ಅವರಿದ್ದ ನ್ಯಾಯಪೀಠವು, ಕೆಪಿಎಸ್‌ಸಿ ಜನವರಿ 29ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಮುಂದಿನ ವಿಚಾರಣೆವರೆಗೆ ಅಮಾನತುಗೊಳಿಸುವಂತೆ ಆದೇಶಿಸಿದೆ.
ಈ ಹಿಂದೆ ಆಗಸ್ಟ್ 27ರಂದು ಕೆಪಿಎಸ್‌ಸಿ 384 ಕೆಎಎಸ್ ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಆದರೆ, ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಪ್ರಶ್ನೆಪತ್ರಿಕೆ ಭಾಷಾಂತರದಲ್ಲಿ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಿ, ಡಿಸೆಂಬರ್ 29ರಂದು ಮರುಪರೀಕ್ಷೆ ನಡೆಸಲು ಆದೇಶಿಸಿತ್ತು. ಆ ಮರುಪರೀಕ್ಷೆಯಲ್ಲಿಯೂ ಅನುವಾದ ದೋಷಗಳು ಕಂಡುಬಂದ ಕಾರಣ ಅಭ್ಯರ್ಥಿಗಳು ಮತ್ತೆ ಕೆಎಸ್ಎಟಿಗೆ ಮೊರೆ ಹೋಗಿದ್ದರು.
ಈ ಹಿನ್ನೆಲೆಯಲ್ಲಿ, ಕೆಎಟಿ ಮುಂದಿನ ಆದೇಶದವರೆಗೆ ನೇಮಕಾತಿ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದ್ದು, ಫೆಬ್ರುವರಿ 25ರಂದು ಮುಂದಿನ ವಿಚಾರಣೆ ನಡೆಯಲಿದೆ.
ಪೂರ್ವಭಾವಿ ಮರುಪರೀಕ್ಷೆಯ ಕುರಿತು ಹಲವು ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಆಕ್ಷೇಪಗಳ ಹಿನ್ನೆಲೆಯಲ್ಲಿ KAT ನಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ KPSC ಮುಂದಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.
ಈ ವಿಷಯದ ಬಗ್ಗೆ ಮತ್ತಷ್ಟು ಮಾಹಿತಿ ಮುಂದಿನ ದಿನಗಳಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ.
To Download Official Announcement
KPSC KAS Exam Update 2025
KAS Preliminary Exam News
KPSC KAS Prelims exam date 2025
KAS 2025 exam latest news and updates
Comments