KAS ಹುದ್ದೆಗಳ ಪೂರ್ವಭಾವಿ ಮರುಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ

KAS ಹುದ್ದೆಗಳ ಪೂರ್ವಭಾವಿ ಮರುಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by Bhagya R K
31 ಜನವರಿ 2025 Others

ಕರ್ನಾಟಕ ಲೋಕಸೇವಾ ಆಯೋಗವು 2024-25 ನೇ ಸಾಲಿನ ಗೆಜೆಟೆಡ್ ಪ್ರೊಬೇಷನ‌ರ್ (KAS) ಗ್ರೂಪ್ - 'ಎ' ಮತ್ತು ಗ್ರೂಪ್- 'ಬಿ' ವೃಂದದ 384 ಹುದ್ದೆಗಳ ನೇಮಕಾತಿಗಾಗಿ 26/02/2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 

                 ಗೆಜೆಟೆಡ್ ಪ್ರೊಬೇಷನ‌ರ್ (KAS) ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಪೂರ್ವಭಾವಿ ಪರೀಕ್ಷೆಯನ್ನು 29-ಡಿಸೆಂಬರ್ 2024ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ(KPSC)ವು ಪರೀಕ್ಷೆಯ ಕೀ ಉತ್ತರಗಳನ್ನು ದಿನಾಂಕ 15/01/2025 ರಂದು ಪ್ರಕಟಿಸಿ 22-ಜನವರಿ-2025 ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. 

ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಆಕ್ಷೇಪಣೆ ಪರಿಶೀಲನೆಯ ನಂತರ ಪರಿಷ್ಕೃತ ಕೀ ಉತ್ತರಗಳನ್ನು ಇದೀಗ ಪ್ರಕಟಿಸಲಾಗಿದೆ. 

ಮುಖ್ಯಾಂಶಗಳು :
- ಪತ್ರಿಕೆ-I (ವಿಷಯ ಸಂಕೇತ-589) ರಲ್ಲಿ 3 ಮತ್ತು ಪತ್ರಿಕೆ-II (ವಿಷಯ ಸಂಕೇತ-590) ರಲ್ಲಿ 2 ಒಟ್ಟು 5 ಪ್ರಶ್ನೆಗಳಿಗಷ್ಟೇ ಗ್ರೇಸ್ ಮಾರ್ಕ್ಸ್ ನೀಡಲಾಗಿದೆ.

ವಿಶೇಷ ಸೂಚನೆ :
ಪರಿಷ್ಕೃತ ಉತ್ತರ ಕೀ ಆಧಾರದ ಮೇಲೆ ಆಕ್ಷೇಪಣೆಗಳ ನಿವಾರಣೆ ಬಳಿಕ ಅಂತಿಮ ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಳ್ಳಲಿದೆ. 

- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.