Add KPSC Vaani to your Home Screen. In Safari, tap Share, then Add to Home Screen.
Advertisement • Go Ad-Free

KPSCಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ PDO ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ

KPSCಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ PDO ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ
Published by Yallamma G
08 ನವೆಂಬರ್ 2024 KPSC

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 15-03-2024 ರಂದು ಅಧಿಸೂಚಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) 97 ಹೈದ್ರಾಬಾದ್-ಕರ್ನಾಟಕ ಗ್ರೂಪ್-'ಸಿ' ವೃಂದದ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 

   ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ದಿನಾಂಕ 16-11-2024ರಂದು ಮತ್ತು 17-11-2024ರಂದು ನಡೆಯುತ್ತಿದ್ದು. ಕರ್ನಾಟಕ ಲೋಕಸೇವಾ ಆಯೋಗ(KPSC)ವು ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರವನ್ನು ಆಯೋಗದ ವೆಬ್ ಸೈಟ್ http://kpsc.kar.nic.in ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಹಾಗೂ ಸದರಿ ಪರೀಕ್ಷೆಯ ವೇಳಾಪಟ್ಟಿಯು ಆಯೋಗದ ವೆಬ್ ಸೈಟ್‌ನಲ್ಲಿ ಲಭ್ಯವಿರುತ್ತದೆ.

    ವಿಶೇಷ ಸೂಚನೆ:- ತಮ್ಮದೇ ಆದ ಲಿಪಿಕಾರರನ್ನು ಕರೆತರುವ ಅಂಗವಿಕಲ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದೊಂದಿಗೆ ಲಿಪಿಕಾರರ ಪ್ರವೇಶ ಪತ್ರವನ್ನು ಸಹ ಡೌನ್ ಲೋಡ್ ಮಾಡಿಕೊಳ್ಳತಕ್ಕದ್ದು.

Advertisement • Go Ad-Free
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.