ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 15-03-2024 ರಂದು ಅಧಿಸೂಚಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) 150 ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ದಿನಾಂಕ 08-ಡಿಸೆಂಬರ್-2024 ರಂದು ರಾಜ್ಯ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ KPSC ಇಲಾಖೆಯು ತನ್ನ ಜಾಲತಾಣದಲ್ಲಿ ಲಿಖಿತ ಪರೀಕ್ಷೆಯ ಪತ್ರಿಕೆ-1&2 ರ ಪ್ರಶ್ನೆ ಪತ್ರಿಕೆಗಳ ಸರಿ ಉತ್ತರಗಳನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಸರಿ ಉತ್ತರವನ್ನು ಡೌನ್ ಲೋಡ್ (Download) ಮಾಡಿಕೊಳ್ಳಬಹುದಾಗಿದೆ.
ಪ್ರಕಟಿಸಲಾದ ಅಧಿಕೃತ ಸರಿ ಉತ್ತರಗಳಿಗೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 03 ಮಾರ್ಚ್ 2025 ರಂದು ಸಂಜೆ 05:30 ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಕೀ-ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿಯೊಂದಿಗೆ ಪ್ರತಿ ಪ್ರಶ್ನೆಗೆ ರೂ.50/-ರಂತೆ ಶುಲ್ಕವನ್ನು (ಐ.ಪಿ.ಓ. ಅಥವಾ ಡಿ.ಡಿ. ಮೂಲಕ) ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಇವರ ಹೆಸರಿಗೆ ಸಂದಾಯ ಮಾಡಬೇಕು. ಒಂದು ವೇಳೆ ನಿಗದಿತ ಶುಲ್ಕವನ್ನು ಪಾವತಿ ಮಾಡದಿದ್ದಲ್ಲಿ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ಪರೀಕ್ಷೆಯ Paper-1 ಮತ್ತು Paper-2 ಎರಡೂ ಪ್ರಶ್ನೆಪತ್ರಿಕೆಗಳ ಕೀ ಉತ್ತರಗಳು ಮತ್ತು ಆಕ್ಷೇಪಣೆ ಸಲ್ಲಿಸಲು ಅಗತ್ಯವಿರುವ Objection Format ಅನ್ನು ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಈ ಮಾಹಿತಿಯನ್ನು ಪರಿಶೀಲಿಸಿ, ತಮ್ಮ ಆಕ್ಷೇಪಣೆಗಳನ್ನು ಸಮಯಮಿತಿಯೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಸಂಪರ್ಕಿಸಿ!
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಾತ್ಕಾಲಿಕ ಸರಿ ಉತ್ತರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
To Download Official Announcement
KPSC PDO Answer Key 2025
KPSC Panchayat Development Officer Answer Key
How to download KPSC PDO answer key 2025
KPSC PDO official key answers PDF download
KPSC PDO exam 2025 answer key and result date
KPSC Panchayat Development Officer exam solutions
Comments