KPSCಯಿಂದ PDO ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾ

KPSCಯಿಂದ PDO ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾ
Published by Bhagya R K
14 ಡಿಸೆಂಬರ್ 2024 Others

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 15-03-2024 ರಂದು ಅಧಿಸೂಚಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) 97 ಹೈದ್ರಾಬಾದ್-ಕರ್ನಾಟಕ ಗ್ರೂಪ್-'ಸಿ' ವೃಂದದ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ದಿನಾಂಕ 16-11-2024 ಮತ್ತು 17-11-2024ರಂದು ರಾಜ್ಯ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಿ, ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಕಟಿಸಲಾಗಿತ್ತು. 

ಪ್ರಕಟಿಸಲಾದ ತಾತ್ಕಾಲಿಕ ಸರಿ ಉತ್ತರಗಳಿಗೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 26-11-2024 ರಂದು ಸಂಜೆ 05:30 ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅದರಂತೆ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಿ ಸಾಮಾನ್ಯ ಜ್ಞಾನ ಪತ್ರಿಕೆ-1ರ (ವಿಷಯ ಸಂಕೇತ-584) ಮತ್ತು ಪತ್ರಿಕೆ-2ರ (ವಿಷಯ ಸಂಕೇತ-585) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತ ಕೀ ಉತ್ತರಗಳನ್ನು ಇದೀಗ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಪರಿಷ್ಕೃತ ಕೀ ಉತ್ತರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.