ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳು ಪ್ರಕಟ
Published by Sanju Shirol
03 ಮಾರ್ಚ್ 2021 KPSC
ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ವೃಂದದ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಈ ಕೆಳಕಂಡಂತೆ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ರಾಜ್ಯ ಆಯೋಗದ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
 
ಹುದ್ದೆಗಳ ಹೆಸರು :
* ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಪ್ರಥಮ ದರ್ಜೆ ಸಹಾಯಕರು
* ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕ್ಷೇತ್ರ ಸಹಾಯಕರು 
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ವಿಜ್ಞಾನ ಶಿಕ್ಷಕರು- ಉಳಿಕೆ ಮೂಲ ವೃಂದ(ಗ್ರೂಪ್ ಸಿ)
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ವಿಜ್ಞಾನ ಶಿಕ್ಷಕರು (ಗ್ರೂಪ್ ಸಿ) 
 
- KPSC ಯು ಪ್ರಕಟಿಸಿರುವ ಈ ತಾತ್ಕಾಲಿಕ ಆಯ್ಕೆ ಪಟ್ಟಿ ಕುರಿತಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಿತ ಹುದ್ದೆಯ ಹೆಸರನ್ನು ನಮೂದಿಸಿ ಪಟ್ಟಿ ಪ್ರಕಟಗೊಂಡ 07 ದಿನದೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗ ಸೌಧ ಬೆಂಗಳೂರು-01 ಇವರಿಗೆ ಲಿಖಿತ ಮೂಲಕ ಮನವಿ ಸಲ್ಲಿಸಲು ಸೂಚಿಸಿದೆ ಹಾಗು ನಂತರದಲ್ಲಿ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಈ ಮೂಲಕ KPSCಯು ತಿಳಿಸಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್' ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಣೆ ಮಾಡಬಹುದು.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.