Loading..!

KPSCಯಿಂದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Bhagya R K | Date:23 ಮೇ 2024
Image not found

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 15/10/2022 ರಂದು ಅಧಿಸೂಚಿಸಲಾದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ 105 (Non HK) ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳನ್ವಯ 2022 ರ ಅನ್ವಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು KPSCಯ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
* ಈ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡ ದಿನದಿಂದ 7 ದಿನಗಳ ಒಳಗಾಗಿ ಲಿಖಿತ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.


ಆಕ್ಷೇಪಣೆ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ,
ಉದ್ಯೋಗ ಸೌಧ, ಬೆಂಗಳೂರು-560001 

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments