KPSCಯ ಗ್ರೂಪ್-ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ

KPSCಯ ಗ್ರೂಪ್-ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ
Published by Bhagya R K
16 ಅಕ್ಟೋಬರ್ 2024 KPSC

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ರಾಜ್ಯ ನಾಗರೀಕ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಬಿ ಹಾಗೂ ಗ್ರೂಪ್-ಸಿ ವೃಂದದ ಹುದ್ದೆಗಳ ನೇಮಕಾತಿಗಾಗಿ 2024 ಮಾರ್ಚ್ ನಲ್ಲಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕವನ್ನು ನಿಗದಿಪಡಿಸಿ ಅರ್ಜಿಗಳನ್ನು ಆನ್ ಲೈನ್ ಮೂಲಕ ಆಹ್ವಾನಿಸಲಾಗಿತ್ತು. 

    ಆದರೆ ಇದೀಗ KPSCಯು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಲ್ಲಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ಮಾಡಿ ಆದೇಶವನ್ನು ಹೊರಡಿಸಿದೆ.

    ಈ ಮೇಲ್ಕಂಡ ಆದೇಶದ ಹಿನ್ನೆಲೆಯಲ್ಲಿ ದಿನಾಂಕ 15-ಮಾರ್ಚ-2024ರ ಅಧಿಸೂಚನೆಯಲ್ಲಿನ ವಿವಿಧ ಗ್ರೂಪ್-ಸಿ ವೃಂದದ ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ, ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಇದೀಗ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ದಿನಾಂಕ:15 ಅಕ್ಟೋಬರ್2024 ರಿಂದ 30-10-2024 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದ್ದು, ಅಭ್ಯರ್ಥಿಗಳು ವಿಸ್ತರಿತ ಕೊನೆಯ ದಿನಾಂಕವಾದ 30-10-2024 ಆಯಾ ಮೀಸಲಾತಿಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

- ಮೇಲ್ಕಂಡ ಸರ್ಕಾರದ ಆದೇಶದನ್ವಯ ವಯೋಮಿತಿ :  
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 41 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷ

- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.