Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹಿಂಪಡೆಯಲಾಗಿದೆ
Published by: Basavaraj Halli | Date:26 ಜೂನ್ 2020
ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹಿಂಪಡೆಯಲಾಗಿದೆ
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ದಿನಾಂಕ 02 ಮಾರ್ಚ್ 2019ರಂದು ವಿವಿಧ ಗ್ರೂಪ್ ಎ, ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿತ್ತು, ತಾಂತ್ರಿಕ ಕಾರಣಗಳಿಂದಾಗಿ ತಕ್ಷಣ ಜಾರಿಗೆ ಬರುವಂತೆ ಈ ಅಧಿಸೂಚನೆಯಲ್ಲಿರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಹಿಂಪಡೆಯಲಾಗಿದ್ದು, ಕೆಪಿಎಸ್ಸಿಯು ಅಧಿಕೃತವಾಗಿ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಯಾವ ಹುದ್ದೆಗಳನ್ನು ನೇಮಕಾತಿ ಪ್ರಕ್ರಿಯಿಂದ ಹಿಂಪಡೆಯಲಾಗಿದೆ ಎಂಬುದರ ಮಾಹಿತಿಯನ್ನು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖಾ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments