KPSC 08 ಆಗಸ್ಟ್‍ 2025 1 year ago
Published by Bhagya R K

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಗ್ರೂಪ್-ಸಿ ಹುದ್ದೆಗಳ ಕನ್ನಡ ಭಾಷಾ ಪರೀಕ್ಷಾ ಪ್ರವೇಶ ಪತ್ರಗಳು ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಗ್ರೂಪ್-ಸಿ ಹುದ್ದೆಗಳ ಕನ್ನಡ ಭಾಷಾ ಪರೀಕ್ಷಾ ಪ್ರವೇಶ ಪತ್ರಗಳು ಬಿಡುಗಡೆ

ಇದೇನು, ಗ್ರೂಪ್-ಸಿ ಪರೀಕ್ಷೆಗೆ ಅರ್ಜಿ ಹಾಕಿದ್ದು ನೆನಪಿದೆಯಾ? ಹಾಗಾದ್ರೆ ಆ ಮೊಬೈಲ್ ಅನ್ನು ತೆಗೆದುಕೊಂಡು ನಿಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಸಿದ್ಧರಾಗಿ!

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಗ್ರೂಪ್-ಸಿ ಹುದ್ದೆಗಳಿಗೆ ಪ್ರವೇಶ ಪತ್ರಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ನಿಮ್ಮ ಕನಸಿನ ಉದ್ಯೋಗಕ್ಕೆ ಮೊದಲ ಹೆಜ್ಜೆ ಇಲ್ಲಿಂದಲೇ ಪ್ರಾರಂಭ.

ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂ: ಪಿಎಸ್‌ಸಿ 503 ಆ‌ಟಿಬಿ-2/2023-24/3494, ದಿನಾಂಕ: 15-03-2024 ರಂದು ಅಧಿಸೂಚಿಸಲಾದ ಪದವಿ ಮಟ್ಟದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ  ವಿವಿಧ ಗ್ರೂಪ್ 'ಸಿ' 313 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕನ್ನಡ ಭಾಷಾ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.

        KPSC ಯು ಈ ಹಿಂದೆ 16-03-2025 ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಲ್ಲಿ, ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮ 2021ರ ತಿದ್ದುಪಡಿ ನಿಯಮಗಳ ಪ್ರಕಾರ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ ಇಲ್ಲದವರು ಮಾತ್ರ ಈ ಪರೀಕ್ಷೆಗೆ ಹಾಜರಾಗಬೇಕು.

ಕರ್ನಾಟಕ ಲೋಕಸೇವಾ ಆಯೋಗವು ತಿಳಿಸಿದಂತೆ ಕನ್ನಡ ಭಾಷಾ ಪರೀಕ್ಷೆಯನ್ನು 16-08-2025 ರಂದು ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು 07-08-2025 ರಿಂದ ಆಯೋಗದ ಅಧಿಕೃತ ವೆಬ್‌ಸೈಟ್ http://kpsconline.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಹಾಗಾದರೆ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಬೇಕಾದರೆ ಏನು ಮಾಡಬೇಕು? ನಿಮ್ಮ ಅಪ್ಲಿಕೇಶನ್ ಸ್ಟೇಟಸ್ ನೋಡಲು ಯಾವ ಲಿಂಕ್ ಬಳಸಬೇಕು? ಪರೀಕ್ಷೆ ಬರೆಯಲು ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು? 

- ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಯೋಗದ ಅಂತರ್ಜಾಲ http://kpsconline.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಸದರಿ ಪರೀಕ್ಷೆಯ ವೇಳಾಪಟ್ಟಿಯು ಆಯೋಗದ ಅಂತರ್ಜಾಲದಲ್ಲಿ ಲಭ್ಯವಿರುತ್ತದೆ.

- ಪರೀಕ್ಷೆಗೆ ಹಾಜರಾಗುವ ಮೊದಲು ಪ್ರವೇಶ ಪತ್ರದ ಎಲ್ಲಾ ಮಾಹಿತಿಯನ್ನು ಪರಿಶೀಲಿಸಿ, ಸಮಯಕ್ಕೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವಂತೆ ಆಯೋಗವು ಸೂಚಿಸಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.