ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 15/10/2022 ರಂದು ಅಧಿಸೂಚಿಸಲಾದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ 105 (Non HK) ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧುಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನಂತರ ಕರ್ನಾಟಕ ನಾಗರೀಕ ಸೇವಾ ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳನ್ವಯ 2022 ರ ಅನ್ವಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು 21/05/2024 ರಂದು ಹಾಗೂ ಅಂತಿಮ ಆಯ್ಕೆ ಪಟ್ಟಿಯನ್ನು 07/08/2024 ರಂದು ಪ್ರಕಟಿಸಲಾಗಿತ್ತು.
ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು (Revised Final Select List) ಪ್ರಕಟಿಸಿದೆ. ಸಮಕ್ಷ ನೇಮಕಾತಿ ಪ್ರಾಧಿಕಾರದ ಇಲಾಖೆಯ ಕೋರಿಕೆಯಂತೆ ಬಿ.ಕಾಂ ಅಭ್ಯರ್ಥಿಗಳನ್ನು ಹೊರತುಪಡಿಸಿ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗೆ ಪ್ರಕಟಿಸಲಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Comments