ಕರ್ನಾಟಕ ಲೋಕಸೇವಾ ಆಯೋಗಯಿಂದ ಕಿರಿಯ ಸಹಾಯಕರು/ SDA ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ

ಕರ್ನಾಟಕ ಲೋಕಸೇವಾ ಆಯೋಗಯಿಂದ ಕಿರಿಯ ಸಹಾಯಕರು/ SDA ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by Yallamma G
04 ಏಪ್ರಿಲ್ 2025 KPSC

               ಕರ್ನಾಟಕ ಲೋಕ ಸೇವಾ ಆಯೋಗದಿಂದ 29-02-2020 ಹಾಗೂ ಸೇರ್ಪಡೆ ಅಧಿಸೂಚನೆ ಸಂಖ್ಯೆ:ಪಿಎಸ್‌ಸಿ/ಇ(3)4(A)/2020-21 ದಿನಾಂಕ:14-05-2020ರನ್ವಯ ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹೈದ್ರಾಬಾದ್-ಕರ್ನಾಟಕ ವೃಂದದ 201 ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ(SDA) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 

               ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ:09-01-2023ರಂದು ಹಾಗೂ ಹೆಚ್ಚುವರಿ ಪಟ್ಟಿಯನ್ನು ದಿನಾಂಕ:05-05-2023ರಂದು ಹಾಗೂ 1ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ದಿ:15-06-2024ರಂದು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲಾನುಕ್ರಮದನುಸಾರ 14 ಹುದ್ದೆಗಳ 2 ಹೆಚ್ಚುವರಿ ಆಯ್ಕೆಪಟ್ಟಿಯನ್ನು ಹಾಗೂ ಕಟ್‌ಆಫ್ ಅಂಕಗಳ ಪಟ್ಟಿಯನ್ನು ಸಿದ್ಧಪಡಿಸಿ ಇದೀಗ ಆಯೋಗದ ವೆಬ್ ಸೈಟ್ ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.