ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ವಿವಿಧ ಹೆಚ್ಚುವರಿ ಆಯ್ಕೆ ಪಟ್ಟಿ ಮತ್ತು ದಾಖಲಾತಿ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಗಳು ಪ್ರಕಟ
Published by Basavaraj Halli
09 ಜನವರಿ 2020
KPSC
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಸದರಿ ಈ ಕೆಳಗೆ ತಿಳಿಸಿರುವ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಮತ್ತು ದಾಖಲಾತಿ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಗೊಂಡ ನೇಮಕಾತಿ ಪ್ರಕ್ರಿಯೆಗಳು:
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕ ಅಥವಾ ಕಂಪ್ಯೂಟರ್ ಆಪರೇಟರ್ ಹುದ್ದೆ 20(13+7HK)
* ಅಲ್ಪಸಂಖ್ಯಾತರ ಇಲಾಖೆಯಲ್ಲಿ ಉರ್ದು ಶಿಕ್ಷಕರ ಹುದ್ದೆಗಳು 41(30+11HK)
* ಕರ್ನಾಟಕ ರಾಜ್ಯ ಲೆಕ್ಕ ಪತ್ರ ಇಲಾಖೆಯಲ್ಲಿ ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳು 234(151+83HK)
ದಾಖಲಾತಿ ಪರಿಶೀಲನೆಗೆ ಆಯ್ಕೆ ಪಟ್ಟಿ ಪ್ರಕಟಗೊಂಡ ನೇಮಕಾತಿ ಪ್ರಕ್ರಿಯೆಗಳು :
* ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿ 2018
* ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿ 2018
* ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಮಹಿಳಾ ವಾರ್ಡನ್ ಹುದ್ದೆಗಳು
* ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ವಾರ್ಡನ್ ಹುದ್ದೆಗಳು
* ಕರ್ನಾಟಕ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಪ್ರಥಮ ದರ್ಜೆ ಸಹಾಯಕ ಅಥವಾ ಕಂಪ್ಯೂಟರ್ ಆಪರೇಟರ್ ಹುದ್ದೆಗಳು
* ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗಳು
ದೈಹಿಕ ಪರೀಕ್ಷೆಗೆ ಆಯ್ಕೆ ಪಟ್ಟಿಗಳು :
* ರಾಜ್ಯ ಅಬಕಾರಿ ಇಲಾಖೆಯಲ್ಲಿನ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಪರೀಕ್ಷೆಗೆ ಆಯ್ಕೆ ಪಟ್ಟಿ
ಈ ಎಲ್ಲ ಪಟ್ಟಿಗಳನ್ನು ವೀಕ್ಷಿಸಲು, ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.
ALL THE BEST