ಕರ್ನಾಟಕ ಲೋಕಸೇವಾ ಆಯೋಗವು ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 29/07/2024 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆಯಲ್ಲಿ ಉಳಿಕೆ ಮೂಲ ವೃಂದದ 400 (342+58 Backlog) ಪಶುವೈದ್ಯಾಧಿಕಾರಿ (Veterinary Officers) ಹುದ್ದೆಗಳ ನೇಮಕಾತಿಗೆ 2025 ಏಪ್ರಿಲ್-08 & 09 ರಂದು ನಡೆಸಲು ಉದ್ದೇಶಿಸಲಾಗಿದ್ದ ಕನ್ನಡ ಭಾಷಾ & ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಡಳಿತಾತ್ಮಕ ಕಾರಣಗಳಿಂದ ಇದೀಗ ಮುಂದೂಡಿ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.!!
ಹುದ್ದೆಗಳ ವಿವರ :
ಪಶುವೈದ್ಯಾಧಿಕಾರಿ | 400 (342+58 Backlog) |
ಪ್ರಮುಖ ಮಾಹಿತಿ :
ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ ಪ್ರಕಟಿಸಿದ ಅಧಿಕೃತ ಮಾಹಿತಿಯಂತೆ, ಈ ಹುದ್ದೆಗಳ ಕನ್ನಡ ಭಾಷಾ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಿರ್ದಿಷ್ಟ ಕಾರಣಗಳಿಂದಾಗಿ ಮುಂದೂಡಲ್ಪಟ್ಟಿವೆ. ಹೊಸ ದಿನಾಂಕಗಳನ್ನು ಬಹುತೇಕ ಶೀಘ್ರದಲ್ಲೇ ಪ್ರಕಟಿಸಲಾಗುವುದು.
ನೀವು ಮಾಡಬೇಕಾದುದು :
- ಅಧಿಕೃತ ವೆಬ್‌ಸೈಟ್‌ನ ಮೇಲೆ ನೋಟಿಫಿಕೇಶನ್ ನಿರೀಕ್ಷಿಸಿ.
- ಹೊಸ ದಿನಾಂಕಗಳು ಪ್ರಕಟಗೊಂಡಾಗ ತಕ್ಷಣವೇ ಸಿದ್ಧಗೊಳ್ಳಿ.
- ನಿಮ್ಮ ಅಧ್ಯಯನ ಕಾರ್ಯವನ್ನು ನಿರಂತರವಾಗಿ ಮುಂದುವರಿಸಿ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಯಾವುದೇ ಗೊಂದಲಕ್ಕೀಡಾಗದೆ ಅಧಿಕೃತ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕು. ಪರೀಕ್ಷೆಯ ಹೊಸ ದಿನಾಂಕ ಪ್ರಕಟವಾದ ತಕ್ಷಣವೇ ಮಾಹಿತಿ ನೀಡಲಾಗುವುದು.
Comments