ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ AE (ಸಹಾಯಕ ಇಂಜಿನಿಯರ್) ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಇದೀಗ ಪ್ರಕಟ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ AE (ಸಹಾಯಕ ಇಂಜಿನಿಯರ್) ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ ಇದೀಗ ಪ್ರಕಟ
Published by Yallamma G
01 ಜನವರಿ 2024 KPTCL-Karnataka Power Transmission Corporation

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳ ನೇಮಕಾತಿಗಾಗಿ 2021-2022ನೇ ಸಾಲಿನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು 24/07/2022 ರಂದು ಯಶಸ್ವಿಯಾಗಿ ನಡೆಸಲಾಗಿತ್ತು. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮತ್ತು ಮೂಲ ದಾಖಲಾತಿ ಪರಿಶೀಲನೆಯ ನಂತರ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು. ನೇಮಕಾತಿಯ ಕೊನೆಯ ಹಂತವಾದ ಅಂತಿಮ ಆಯ್ಕೆಪಟ್ಟಿಯನ್ನು ಕಟ್ ಆಫ್ ಅಂಕಗಳೊಂದಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ತನ್ನ ಇಲಾಖಾ ಜಾಲತಾಣದಲ್ಲಿ ಇದೀಗ ಪ್ರಕಟಿಸಿದೆ.
* ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಆಯ್ಕೆಪಟ್ಟಿ ವೀಕ್ಷಿಸಬಹುದಾಗಿದೆ. 

 

Discussion & Comments (1)

Have a query or feedback about this update?

U
User
03 ಜನವರಿ 2024, 08:14 ಪೂರ್ವಾಹ್ನ

No comments

Stay Updated with KPSC Vaani

Get instant notifications for exam alerts, question papers, syllabus, and results directly on your phone.