Loading..!

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (KPTCL) ಗ್ರೂಪ್-ಎ & ಬಿ ವೃಂದದ ಹುದ್ದೆಗಳ ನೇಮಕಾತಿಯ ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರವೇಶ ಪತ್ರ ಪ್ರಕಟ
| Date:29 ಸೆಪ್ಟೆಂಬರ್ 2019
Image not found
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (KPTCL) ಗ್ರೂಪ್-ಎ & ಬಿ ವೃಂದದ ಹುದ್ದೆಗಳ ನೇಮಕಾತಿಯ ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ವೇಳಾಪಟ್ಟಿ ಪ್ರಕಟ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ(KPTCL) ಖಾಲಿ ಇರುವ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೂ ಮುನ್ನ ಕನ್ನಡ ಭಾಷಾ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಈ ಕೆಳಗೆ ನೀಡಿರುವ ವೇಳಾಪಟ್ಟಿಯಂತೆ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಬೇಕು ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಬೇಕಾದ ಅರ್ಹತೆಯ ಬಗ್ಗೆ ಅಧಿಸೂಚನೆಗೆ ಸಂಬಂಧಿಸಿದ ಮಾಹಿತಿಯನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL)ಗಳ ಅಧಿಕೃತ ವೆಬ್-ಸೈಟ್ ನಿಂದ ಪಡೆಯಬಹುದಾಗಿದೆ.
ದಿನಾಂಕ 05-10-2019 ಶನಿವಾರದಂದು "ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್(ವಿದ್ಯುತ್), ಸಹಾಯಕ ಎಂಜಿನಿಯರ್(ವಿದ್ಯುತ್) ಹಾಗೂ ಸಹಾಯಕ ಎಂಜಿನಿಯರ್(ಸಿವಿಲ್) ಹುದ್ದೆಗಳಿಗೆ ಮಧ್ಯಾಹ್ನ ಎರಡು ಗಂಟೆಯಿಂದ ಸಂಜೆ ಐದು ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆಯು ವಿವರಣಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ.

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯು ಪ್ರಕಟಿಸಿದ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments