KPTCL-Karnataka Power Transmission Corporation
19 ಜೂನ್ 2020
6 years ago
Published by Basavaraj Halli
KPTCL ಮತ್ತು HESCOM ಕಿರಿಯ ಸ್ಟೇಷನ್ ಪರಿಚಾರಕ ಹಾಗೂ ಕಿರಿಯ ಪವರ್ ಮ್ಯಾನ್ ಹುದ್ದೆಗಳ ಸಹನಾ ಶಕ್ತಿ ಪರೀಕ್ಷೆ ನಡೆಸುವ ಕುರಿತು
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮ ನಿಯಮಿತಗಳಲ್ಲಿ ಖಾಲಿ ಉಳಿದಿರುವ ಕಿರಿಯ ಸ್ಟೇಷನ್ ಪರಿಚಾರಕ ಹಾಗೂ ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಕಳೆದ ವರ್ಷದ ಅಕ್ಟೋಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಅಭ್ಯರ್ಥಿಗಳ ಸಹನಾ ಶಕ್ತಿ ಪರೀಕ್ಷೆಯನ್ನು ನಡೆಸಲಾಗಿತ್ತು, ಸದರಿ ಪರೀಕ್ಷೆಯಲ್ಲಿ ಹಲವಾರು ಅಭ್ಯರ್ಥಿಗಳು ಗೈರು ಹಾಜರಾಗಿದ್ದು ಅಲ್ಲದೆ ಕೆಲ ಅಭ್ಯರ್ಥಿಗಳು ಅನರ್ಹಗೊಂಡಿರುವುದರಿಂದ ಅರ್ಹ ಅಭ್ಯರ್ಥಿಗಳ ಆಯ್ಕೆಗೆ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಡೌನ್ ದಿ ಲೈನ್ ನಲ್ಲಿ ಲಭ್ಯ ಇರುವ ಅರ್ಹ ಅಭ್ಯರ್ಥಿಗಳಿಗೆ ಸಹನಾ ಶಕ್ತಿ ಪರೀಕ್ಷೆಗೆ ಮತ್ತೆ ಕರೆ ಪತ್ರವನ್ನು ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆ ಪ್ರಕಟಿಸಿದ ಅಧಿಕೃತ ಪ್ರಕಟಣೆಯನ್ನು ಹಾಗೂ ಕಟ್ ಆಫ್ ಅಂಕಗಳನ್ನು ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.