Loading..!

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿನ ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯ ಕಟ್ ಆಫ್ ಅಂಕಗಳು ಇದೀಗ ಪ್ರಕಟ
Published by: Bhagya R K | Date:17 ಮೇ 2024
Image not found

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿನ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗಾಗಿ 01/02/2022 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಪಿಟ್ಯೂಡ್ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಜೇಷ್ಠತೆಯ ಆಧಾರದ ಮೇಲೆ ಕಿರಿಯ ಸಹಾಯಕ (KK & N. KK) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ  ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕಟ್ ಆಫ್ (Cut-off) ಅಂಕಗಳೊಂದಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ತನ್ನ ಅಂತರ್ಜಾಲದಲ್ಲಿ ಇದೀಗ ಪ್ರಕಟಿಸಿದೆ.

* ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಹಾಗೂ ಕಟ್ ಆಫ್ ಅಂಕಗಳನ್ನು ವೀಕ್ಷಿಸಬಹುದಾಗಿದೆ.

Comments