Loading..!

KPTCL ಮತ್ತು ಎಲ್ಲ ESCOM ಗಳಿಂದ ಸಹನಾ ಪರೀಕ್ಷೆಗೆ ಅಭ್ಯರ್ಥಿಗಳ ಪ್ರವೇಶ ಪತ್ರ ಮತ್ತು ಕಟ್ ಆಫ್ ಅಂಕಗಳು ಪ್ರಕಟ
| Date:7 ಅಕ್ಟೋಬರ್ 2019
Image not found
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಮತ್ತು ವಿವಿಧ ಎಸ್ಕಾಂಗಳಲ್ಲಿನ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ಟೋಬರ್ 21 ರಿಂದ 25 ರವರೆಗೆ ಸಹನಾ ಪರೀಕ್ಷೆಯನ್ನು ಏರ್ಪಡಿಸಲಾಗಿದೆ. ರಾಜ್ಯದಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಟಿಸಿಎಲ್ ಮತ್ತು ಎಲ್ಲ ಎಸ್ಕಾಂಗಳ ಜಾಲತಾಣಗಲ್ಲಿ ಪ್ರಕಟಿಸಲಾಗಿದೆ. ಜತೆಗೆ ಶೇಕಡಾವಾರು ಕಟ್ ಆಫ್ ಅಂಕಗಳನ್ನು ಕೆಪಿಟಿಸಿಎಲ್ ಅಧಿಕೃತ ಜಾಲತಾಣಗಳಲ್ಲಿ ಒದಗಿಸಲಾಗಿದ್ದು

ಸಹನಾ ಶಕ್ತಿ ಪರೀಕ್ಷೆಗೆ ಪ್ರವೇಶ ಪತ್ರವನ್ನು ಜಾಲತಾಣಳಲ್ಲಿ ಒದಗಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಜಾಲತಾಣದಲ್ಲಿ ತಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕದ ಮೂಲಕ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಪರೀಕ್ಷೆ ನಡೆಯುವ ದಿನಾಂಕ ಮತ್ತು ಸ್ಥಳ ಮಾಹಿತಿಯನ್ನು ಪ್ರವೇಶ ಪತ್ರದಲ್ಲಿ ನೀಡಲಾಗಿದ್ದು, ಅಭ್ಯರ್ಥಿಗಳು ನಿಗದಿತ ದಿನಾಂಕದಂದು ಪ್ರವೇಶಪತ್ರ ಮತ್ತು ಸಂಬಂಧಪಟ್ಟ ಎಲ್ಲ ಮೂಲ ದಾಖಲೆ ಮತ್ತು ಪ್ರತಿಗಳೊಂದಿಗೆ ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಬದಲಾವಣೆ ಕುರಿತು ಅಭ್ಯರ್ಥಿಗಳು ಯಾವುದೇ ಮನವಿಗಳಿಗೆ ಮನ್ನಣೆ ನೀಡಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಅಭ್ಯರ್ಥಿಗಳು ನಿಗಧಿಪಡಿಸಿದ ಅಂಕಗಳಿಗಿಂತ ಹೆಚ್ಚಿದ್ದಲ್ಲಿ ಮಾತ್ರ ಅಭ್ಯರ್ಥಿಗಳನ್ನು ಸಹನಾ ಪರೀಕ್ಷೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಪರೀಕ್ಷೆಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments