ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ವಿವಿಧ ಪದವೃಂದದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ದಿನಾಂಕ 25/02/2019 ರಂದು ಉದ್ಯೋಗ ಪ್ರಕಟನೆಯನ್ನು ಹೊರಡಿಸಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು ಹಾಗೂ ದಿನಾಂಕ 11/03/2019 ರ ತಿದ್ದುಪಡಿಯಲ್ಲಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಯಾವುದಾದರು ಒಂದು ಕಂಪನಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ತಿಳಿಸಲಾಗಿತ್ತು.
ದಿನಾಂಕ 11 /03 /2019 ರ ತಿದ್ದುಪಡಿಯಲ್ಲಿ ಸ್ಪಷ್ಟವಾಗಿ ಸೂಚಿಸಿದ್ದರೂ, ಕೆಲವು ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದು ಕಂಪನಿಯಲ್ಲಿ ಅಥವಾ ಒಂದಕ್ಕಿಂತ ಹೆಚ್ಚು ಕಂಪನಿಗಳಲ್ಲಿ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿರುವುದು ಕಂಡುಬಂದಿರುತ್ತದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅಥವಾ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಒಂದು ಹುದ್ದೆಗೆ, ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳು ತಾವು ಇಚ್ಛಿಸುವ ಯಾವುದಾದರೂ ಒಂದು ಕಂಪನಿಗೆ ಸಲ್ಲಿಸಿರುವ ಅರ್ಜಿಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅದರಿಂದ ವಿವಿಧ ಪದವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು, ದಿನಾಂಕ 29 /06 /2019 ರಿಂದ 05 /07 /2019ರ ಸಂಜೆ 5 ಗಂಟೆಯೊಳಗೆ ಈ ಕೆಳಕಂಡ ವೆಬ್ ಸೈಟ್ ನಲ್ಲಿ ಅರ್ಜಿ ಸಂಖ್ಯೆ ಹಾಗೂ ಜನ್ಮದಿನಾಂಕದೊಂದಿಗೆ ಲಾಗ್ ಆನ್ ಮಾಡಿ ಈಗಾಗಲೇ ಸಲ್ಲಿಸಿರುವ ಅರ್ಜಿಗಳಲ್ಲಿ ತಾವು ಇಚ್ಛಿಸುವ ಯಾವುದಾದರೂ ಒಂದು ಕಂಪನಿಗೆ ಸಲ್ಲಿಸಿರುವ ಒಂದು ಅರ್ಜಿಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ.ಒಂದು ವೇಳೆ ಅಭ್ಯರ್ಥಿಗಳು ಮೇಲೆ ತಿಳಿಸಿರುವ ದಿನಾಂಕದೊಳಗೆ ಪರಿಗಣಿಸಬೇಕಾದ ನಿರ್ದಿಷ್ಟ ಅರ್ಜಿಯನ್ನು ಆಯ್ಕೆ ಮಾಡಿಕೊಳ್ಳದಿದ್ದ ಪಕ್ಷದಲ್ಲಿ ಅಭ್ಯರ್ಥಿಗಳು ಕೊನೆಯದಾಗಿ ಯಾವ ಕಂಪನಿಗೆ ಅರ್ಜಿಯನ್ನು ಸಲ್ಲಿಸಿರುತ್ತಾರೋ, ಆ ಅರ್ಜಿಯನ್ನು ಅರ್ಹವಾಗಿದಲ್ಲಿ ಮಾತ್ರ ನೇಮಕಾತಿಗಾಗಿ ಪರಿಗಣಿಸಲಾಗುವುದು.
* ಉಳಿದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು.

Comments