ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇಲಾಖೆಯಲ್ಲಿ ಖಾಲಿಯಿರುವ ಸುಮಾರು 4000ದಷ್ಟು ನಾಗರಿಕ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 25 ಮೇ 2021 ರಂದು ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿತ್ತು, ಹಾಗೂ ಈ ಹುದ್ದೆಗಳಿಗೆ ದಿನಾಂಕ 24 ಅಕ್ಟೋಬರ 2021 ರಂದು ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಈ ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ವಿಜಯಪುರ, ಬಾಗಲಕೋಟ, ದಾವಣಗೆರೆ, ದಕ್ಷಿಣ ಕನ್ನಡಜಿಲ್ಲೆ ಮಂಗಳೂರು, ರಾಯಚೂರು, ಬೆಳಗಾವಿ, ಚಿಕ್ಕ ಬಳ್ಳಾಪುರ ಜಿಲ್ಲೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Comments