ಕರ್ನಾಟಕ ಪೊಲೀಸ್ ಇಲಾಖೆಯಿಂದ 402 Civil PSI ಹುದ್ದೆಗಳ ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ

ಕರ್ನಾಟಕ ಪೊಲೀಸ್ ಇಲಾಖೆಯಿಂದ 402 Civil PSI ಹುದ್ದೆಗಳ ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by Yallamma G
29 ನವೆಂಬರ್ 2025 Karnataka State Police

            ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) (ಪುರುಷ ಮತ್ತು ಮಹಿಳಾ)ಹುದ್ದೆಗಳ ನೇಮಕಾತಿಗಾಗಿ 03/03/2021 ರಲ್ಲಿ ಅಧಿಸೂಚನೆಯನ್ನು ಹೊರಡಿಸಿ, ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು.

                ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 2024 ಅಕ್ಟೋಬರ್ 03 ರಂದು ರಾಜ್ಯ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಮತ್ತು 11/04/2024 ರಂದು ಅಂತಿಮ ಅಂಕ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ನೇಮಕಾತಿ ಮುಂದುವರಿದ ಹಂತವಾದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸರ್ಕಾರ ಪಾತ್ರದಲ್ಲಿ ನಿರ್ದೇಶಿಸಿರುವಂತೆ 381 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಯಾರಿಸಿ, ಉಲ್ಲೇಖ(7)ರನ್ವಯ ದಿನಾಂಕ: 26.12.2024 ರಂದು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿರುತ್ತದೆ.

          ಸದರಿ ಹುದ್ದೆಗಳ ನೇಮಕಾತಿ ಸಲುವಾಗಿ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹದಾರ್ಡ್ಯತೆ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳನ್ನು ನಡೆಸಿದ ನಂತರ ಸದರಿ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಕೂಡ KSPಯು ಪ್ರಕಟಿಸಿತ್ತು. ಉಲ್ಲೇಖ(10)ರ ತಮ್ಮ ಪತ್ರಗಳಲ್ಲಿ ಸದರಿ ಹುದ್ದೆಯ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳಲ್ಲಿ 40 ಅಭ್ಯರ್ಥಿಗಳು ಸದರಿ ಹುದ್ದೆಗೆ ಸೇರಲು ಇಚ್ಚೆ ಇಲ್ಲವೆಂದು ತಿಳಿಸಿರುವುದರಿಂದ ಮತ್ತು ನಿಗದಿತ ಅವಧಿಯೊಳಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಇರುವುದರಿಂದ ನಿಯಮಾನುಸಾರ ಅಂತಹ ಅಭ್ಯರ್ಥಿಗಳ ನೇಮಕಾತಿ ಆದೇಶಗಳನ್ನು ರದ್ದುಪಡಿಸಲಾಗಿದ್ದು, ಸದರಿ ಅಭ್ಯರ್ಥಿಗಳ ಬದಲಿಗೆ ಮುಂದಿನ ಅರ್ಹ ಅಭ್ಯರ್ಥಿಗಳನ್ನು ನೀಡಬೇಕೆಂದು ಕೋರಲಾಗಿರುತ್ತದೆ.

             ಅದರಂತೆ ತಮ್ಮ ಪತ್ರದಲ್ಲಿ ಕೋರಿರುವಂತೆ ಹಾಗೂ ಆಯ್ಕೆ ಸಮಿತಿಯ ತೀರ್ಮಾನದಂತೆ, ಸದರಿ ಅಭ್ಯರ್ಥಿಗಳನ್ನು ಅಂತಿಮ ಆಯ್ಕೆ ಪಟ್ಟಿಯಿಂದ ತೆಗೆದು ಹಾಕಿ. ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿಯನ್ನು ತಯಾರಿಸಲಾಗಿರುತ್ತದೆ. ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾಗಿರುವ ಹೊಸ ಅಭ್ಯರ್ಥಿಗಳಿಗೆ ಶೀಘ್ರವಾಗಿ ನಿಯಮಾನುಸಾರ ವೈದ್ಯಕೀಯ ಪರೀಕ್ಷೆಯನ್ನು ಹಾಗೂ ದಾಖಲಾತಿಗಳ ಪರಿಶೀಲನೆಯನ್ನು ಕೈಗೊಂಡು ವರದಿಗಳನ್ನು ಈ ಕಛೇರಿಗೆ ಸಲ್ಲಿಸುವುದು. ಒಂದು ವೇಳೆ ಸದರಿ ಪರಿಶೀಲನೆಯ ಪ್ರಕ್ರಿಯೆಗಳು ಪೂರ್ಣಗೊಂಡಿದ್ದಲ್ಲಿ, ಸದರಿ ಅಭ್ಯರ್ಥಿಗಳ ಮಾಹಿತಿಯನ್ನು / ದಾಖಲಾತಿಗಳನ್ನು ಸಂಬಂಧಪಟ್ಟ ಘಟಕಗಳಿಂದ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

👉 ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು ಈ ಕೆಳಗೆ ನೀಡಲಾಗಿದೆ ವೀಕ್ಷಿಸಿ.. 

ಮುಂದಿನ ಹಂತವೇನು? (Next Steps for Selected Candidates)

ಪರಿಷ್ಕೃತ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಘಟಕಗಳಿಂದ ಕರೆ ಬಂದ ತಕ್ಷಣ ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಗೆ ಹಾಜರಾಗಲು ಸಿದ್ಧರಾಗಿರಬೇಕು. ಯಾವುದೇ ಗೊಂದಲಗಳಿದ್ದಲ್ಲಿ ಇಲಾಖೆಯ ಅಧಿಕೃತ ವೆಬ್‌ಸೈಟ್ ಅಥವಾ ಸಂಬಂಧಪಟ್ಟ ಕಚೇರಿಗಳನ್ನು ಸಂಪರ್ಕಿಸಿ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.