ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿ ಪ್ರವೇಶ ಪತ್ರಗಳನ್ನು ಪ್ರಕಟಿಸಿದೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿ ಪ್ರವೇಶ ಪತ್ರಗಳನ್ನು ಪ್ರಕಟಿಸಿದೆ
13 ಸೆಪ್ಟೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 10 ಜೂನ್ 2019 ರಂದು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 163 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಸ್ತುತ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಲಿಖಿತ ಪರೀಕ್ಷೆಯ ದಿನಾಂಕವನ್ನು ಇಲಾಖೆಯು ನಿಗದಿಪಡಿಸಿದೆ, ಪ್ರಸ್ತುತ ಈ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ದಿನಾಂಕ 22 ಸೆಪ್ಟೆಂಬರ್ 2019 ರಂದು ಇಲಾಖೆಯು ನಿಗದಿಪಡಿಸಿ ಪ್ರಕಟಣೆ ಹೊರಡಿಸಿದೆ ಮತ್ತು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಪ್ರವೇಶಪತ್ರಗಳನ್ನು ಜಾಲತಾಣದಲ್ಲಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಹಾಗೂ ಪ್ರವೇಶ ಪತ್ರದಲ್ಲಿ ತಿಳಿಸಿದ ದಿನಾಂಕ ಹಾಗೂ ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಾಗಲು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.