ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಮತ್ತು ರಿಸರ್ವ್ (Civil and Reserve) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಮತ್ತು ರಿಸರ್ವ್ (Civil and Reserve) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರಗಳು ಪ್ರಕಟ
18 ಸೆಪ್ಟೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ರಿಸೆರ್ವೆ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 15-07-2019 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆಯನ್ನು ನಡೆಸಲು ರಾಜ್ಯ ಪೊಲೀಸ್ ಇಲಾಖೆಯು ತೀರ್ಮಾನಿಸಿದ್ದು, ಬೆಂಗಳೂರು ಹಾಗೂ ಮೈಸೂರು ಭಾಗದ ಅಭ್ಯರ್ಥಿಗಳಿಗೆ ಈ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಿದೆ. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ದಿನಾಂಕ 23 ಸೆಪ್ಟೆಂಬರ್ 2019 ರಿಂದ ದೈಹಿಕ ಪರೀಕ್ಷೆಗಳು ಆರಂಭವಾಗಿ ದಿನಾಂಕ 03 ಅಕ್ಟೋಬರ್ 2019 ರವರೆಗೆ ಈ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳು ನಡೆಯುವ ಸ್ಥಳದ ಮಾಹಿತಿಯನ್ನು ಈ ಕೆಳಗೆ ನೀಡಿರುವ ಅಧಿಸೂಚನೆಯಲ್ಲಿ ನೀಡಲಾಗಿದ್ದು, ಅಭ್ಯರ್ಥಿಗಳಿಗೆ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಇಲಾಖೆಯ ಜಾಲತಾಣದಲ್ಲಿ ಅವಕಾಶ ಒದಗಿಸಲಾಗುವದು. * ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ತಮ್ಮ ಜನ್ಮ ದಿನಾಂಕ ಮತ್ತು ಅಪ್ಲಿಕೇಶನ್ ನಂಬರ್ ನಮೂದಿಸುವ ಮೂಲಕ ಡೌನ್ಲೋಡ್ ಮಾಡಿಕೊಂಡು ನಿಗದಿಪಡಿಸಿದ ಸ್ಥಳದಲ್ಲಿ ಕಡ್ಡಾಯವಾಗಿ ದೈಹಿಕ ಪರೀಕ್ಷೆಗೆ ಹಾಜರಾಗಬೇಕು ಪರೀಕ್ಷೆಗೆ ಹಾಜರಾಗದ ಅಭ್ಯರ್ಥಿಗಳನ್ನು ನೇಮಕಾತಿಯಿಂದ ಕೈ ಬಿಡಲಾಗುವುದೆಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.