ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 200 ನಾಗರೀಕ (ಸಿವಿಲ್) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 200 ನಾಗರೀಕ (ಸಿವಿಲ್) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ..!
05 ಡಿಸೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 200 ನಾಗರೀಕ (ಸಿವಿಲ್) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಕ್ಕೆ ಡಿಸೆಂಬರ್ 8 ರಂದು ನಡೆಸಬೇಕಾಗಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಿದೆ. ಇಲಾಖೆಯ ಮಾಹಿತಿ ಪ್ರಕಾರ ಡಿ. 8 ರಂದು ಈ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿತ್ತು. ಇಲಾಖೆ ಈ ಕುರಿತು ಅಧಿಕೃತವಾಗಿ ದಿನಾಂಕ ಪ್ರಕಟಿಸದೇ ಇದ್ದರೂ, ಇದಕ್ಕೆ ಸಿದ್ದಪಡಿಸಿದ್ದ ವೇಳಾಪಟ್ಟಿಯೂ ಬಹಿರಂಗಗೊಂಡಿತ್ತು. ಹೀಗಾಗಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಆದರೆ ಇಲಾಖೆಯು ಪ್ರವೇಶ ಪತ್ರವನ್ನು ಇನ್ನು ಒದಗಿಸಿಲ್ಲ. ಹೀಗಾಗಿ ಪರೀಕ್ಷೆ ಮುಂದೂಡಿರುವುದು ಖಚಿತವಾಗಿದೆ. ನವೆಂಬರ್ 3 ರಿಂದ ಪ್ರತಿ ಭಾನುವಾರ ಇಲಾಖೆ ಒಂದಲ್ಲ ಒಂದು ಲಿಖಿತ ಪರೀಕ್ಷೆ ನಡೆಸಿಕೊಂಡು ಬಂದಿದ್ದು. ಈ ಪ್ರಕಾರವೇ ಈ ಪರೀಕ್ಷೆ ನಡೆಸಲಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತಾದರೂ, ಸಹಿಷ್ಟುತೆ ಮತ್ತು ದೇಹದಾರ್ಢ್ಯ ಪರೀಕ್ಷೆ ಇನ್ನು ಪೂರ್ಣವಾಗದೆ ಇರುವದು ಪರೀಕ್ಷೆ ಮುಂದೂಡಲು ಕಾರಣ ಎನ್ನಲಾಗಿದೆ.
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.