ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 420 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 420 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ  ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
12 ಮಾರ್ಚ್ 2024 Karnataka State Police

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 420 ಕಲ್ಯಾಣ ಕರ್ನಾಟಕದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (PC - CAR / DAR ) ಹುದ್ದೆಗಳ ನೇಮಕಾತಿಗಾಗಿ 2022 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ಮೊದಲ ಹಂತವಾದ ಲಿಖಿತ ಪರೀಕ್ಷೆಯನ್ನು ದಿನಾಂಕ 10 ಸೆಪ್ಟೆಂಬರ್ 2023 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಿ, ನಂತರ ದೈಹಿಕ ಪರೀಕ್ಷೆಯನ್ನು 2024 ಫೆಬ್ರವರಿ 12 ರಿಂದ 15 ರ ವರೆಗೆ ನಡೆಸಲಾಗಿತ್ತು.  ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ KSP ಇಲಾಖೆಯು ತನ್ನ ಜಾಲತಾಣದಲ್ಲಿ ಕಲಬುರಗಿ, ರಾಯಚೂರು ಮತ್ತು ಬೀದರ್ ಯ ವೈದ್ಯಕೀಯ ಪರೀಕ್ಷೆ & ದಾಖಲಾತಿ ಪರಿಶೀಲನೆ (Document Verification)ಗೆ 1:1 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಇದೀಗ ಪ್ರಕಟಿಸಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.