ಕರ್ನಾಟಕ ಪೊಲೀಸ್ ಇಲಾಖೆಯಿಂದ 3064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ದೈಹಿಕ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ

ಕರ್ನಾಟಕ ಪೊಲೀಸ್ ಇಲಾಖೆಯಿಂದ 3064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ದೈಹಿಕ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
13 ಮಾರ್ಚ್ 2024 Karnataka State Police

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಮಿಕ್ಕುಳಿದ ವೃಂದದ 3064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC - CAR / DAR ) ಹುದ್ದೆಗಳ ನೇಮಕಾತಿಗಾಗಿ 2022 ಸೆಪ್ಟೆಂಬರ್ ನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಹಾಗೂ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ  ದಿನಾಂಕ 28/01/2024 ರಂದು ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ನೇಮಕಾತಿಯ ಮುಂದಿನ ಹಂತವಾದ ದೈಹಿಕ ಪರೀಕ್ಷೆಯನ್ನು ನಡೆಸಲು ದೈಹಿಕ ಪರೀಕ್ಷೆಗೆ  (PST & PET) ಅರ್ಹರಾದ ಅಭ್ಯರ್ಥಿಗಳ ಜಿಲ್ಲಾವಾರು ತಾತ್ಕಾಲಿಕ ಆಯ್ಕೆಪಟ್ಟಿ ಮತ್ತು ದೈಹಿಕ ಪರೀಕ್ಷೆ ನಡೆಯುವ ದಿನಾಂಕವನ್ನು KSP ಇಲಾಖೆಯು ತನ್ನ ಜಾಲತಾಣದಲ್ಲಿ ಇದೀಗ ಪ್ರಕಟಿಸಿದೆ. ದೈಹಿಕ ಪರೀಕ್ಷೆಯು ದಿನಾಂಕ 18/03/2024 ರಿಂದ ಆರಂಭಗೊಂಡು 22/03/2024 ವರೆಗೆ ನಡೆಯಲಿದೆ. 

- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ದೈಹಿಕ ಪರೀಕ್ಷೆಗೆ  (PST & PET) ಅರ್ಹರಾದ ಅಭ್ಯರ್ಥಿಗಳ ಜಿಲ್ಲಾವಾರು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.