ಇತ್ತೀಚೆಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ ಪೋಲಿಸ್ ಕಾನ್ಸ್ಟೇಬಲ್ ಸಿವಿಲ್ ಮತ್ತು ಸಿಎಆರ್/ಡಿಎಆರ್ ಹುದ್ದೆಗಳಿಗೆ ನಿಗದಿಪಡಿಸಿದ ಗರಿಷ್ಠ ವಯೋಮಿತಿಯನ್ನು ಕೇವಲ ಒಂದು ಬಾರಿಗೆ ಅನ್ವಯಿಸುವಂತೆ ಎರಡು ವರ್ಷಗಳಿಗೆ ಹೆಚ್ಚಿಸಿ ಇದೀಗ ರಾಜ್ಯ ಸರ್ಕಾರವು ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ.
ಕಳೆದ 3 ವರ್ಷಗಳಿಂದ ಕೋವಿಡ್-19 ಕಾರಣದಿಂದಾಗಿ ನಿಯಮಿತವಾಗಿ ನೇಮಕಾತಿ ನಡೆಯದ ಪ್ರಯುಕ್ತ ಆಕಾಂಕ್ಷಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ವಂಚಿತರಾಗಿರುವುದರಿಂದ ವಯೋಮಿತಿಯಲ್ಲಿ 2 ವರ್ಷಗಳ ವಿನಾಯಿತಿ ನೀಡುವಂತೆ ಹಲವಾರು ಮನವಿಗಳು ಸ್ವೀಕೃತವಾಗಿರುವದನ್ನು ಪರಿಗಣಿಸಿ ರಾಜ್ಯ ಪೊಲೀಸ್ ಇಲಾಖೆಯು ಕೇವಲ ಒಂದು ಬಾರಿಗೆ ಅನ್ವಯಿಸುವಂತೆ 2022-23ನೇ ಸಾಲಿನಲ್ಲಿ ಅಧಿಸೂಚಿಸಲಾದ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಮತ್ತು ಸಿಎಆರ್/ಡಿಎಆರ್ ಹುದ್ದೆಗಳಿಗೆ ನಿಗದಿಪಡಿಸಿದ ಗರಿಷ್ಠ ವಯೋಮಿತಿಯನ್ನು 2 ವರ್ಷ ಗಳಿಗೆ ಹೆಚ್ಚಿಸುವಂತೆ ಆದೇಶಿಸಲಾಗುತ್ತದೆ.
ಈ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
Comments