ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1142 ಪೊಲೀಸ್ ಸಬ್ ಇನ್ಸ್ ಪೆಕ್ಟರ್(PSI) ಹಾಗೂ 4460 ಪೊಲೀಸ್ ಕಾನ್ಸ್ ಟೇಬಲ್(PC) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಇದರಿಂದಾಗಿ ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವದು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಹುದ್ದೆಗಳ ಬಗ್ಗೆ ರಾಜ್ಯ ಹೈಕೋರ್ಟ್ ನಲ್ಲಿ ಸ್ವಯಂ ಪ್ರೇರಿತವಾಗಿ ದಾಖಲು ಮಾಡಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಿಚಾರಣೆ ನಡೆಸಿ ಖಾಲಿ ಹುದ್ದೆಗಳ ಭರ್ತಿಗೆ 8 ತಿಂಗಳ ಕಾಲಾವಕಾಶವನ್ನು ಕೋರಿದ್ದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಜೊತೆಗೆ ನ್ಯಾಯಪೀಠವು, ಕಾಲಾವಕಾಶ ನೀಡಲು ಸಾಧ್ಯವಿಲ್ಲ ಅಲ್ಲದೆ 1 ವಾರದಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಸಂಬಂಧ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತು.
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಂದಾಗಿ ಸಮರ್ಪಕವಾಗಿ ಕಾನೂನು ಸುವ್ಯವಸ್ಥೆ ನಿರ್ವಹಣೆಯಾಗುತ್ತಿಲ್ಲ ಎಂಬುದಾಗಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ PIL ದಾಖಲು ಮಾಡಿಕೊಂಡು, ಈ ಅರ್ಜಿಯ ವಿಚಾರಣೆ ನಡೆಸಿ, ಶೀಘ್ರದಲ್ಲೇ 1,142 PSI ಮತ್ತು 4,460 PC ಹುದ್ದೆಗಳ ಭರ್ತಿ ಮಾಡಲು ಸೂಕ್ತ ಕ್ರಮ ಕೈಕೊಳ್ಳುವಂತೆ ರಾಜ್ಯ ಪೊಲೀಸ್ ಇಲಾಖೆಗೆ ಸೂಚಿಸಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಈ ಹುದ್ದೆಗಳಿಗೆ ಅಧಿಸೂಚನೆ ಹೊರಬರುವ ಸಾಧ್ಯತೆಯಿದ್ದು, PSI / PC ಆಕಾಂಕ್ಷಿಗಳು ಈಗಿನಿಂದಲೇ ಸೂಕ್ತ ತಯಾರಿನಡೆಸಿ ಯಶಸ್ವಿಯಾಗಿ....
Comments