ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಭಾರತದಲ್ಲಿಯೇ ಮೊದಲ ಬಾರಿಗೆ 'ಕೃತ್ಯ ಸ್ಥಳ ಪರಿಶೀಲನಾಧಿಕಾರಿ' (Scene of Crime Officers) ಹುದ್ದೆಯನ್ನು ಸೃಷ್ಟಿಸಿದೆ.
ಈ ಅಧಿಕಾರಿಗಳು ಅಪರಾಧ ಕೃತ್ಯ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ, ಸೂಕ್ಷ್ಮಾತಿಸೂಕ್ಷ್ಮ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಅಪರಾಧವನ್ನು ಪತ್ತೆ ಮಾಡಲು ಈ ವಿಶೇಷ ಅಧಿಕಾರಿಗಳು ನೆರವಾಗುವರು. ಭಾರತದಲ್ಲಿಯೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಈ ಹುದ್ದೆಯನ್ನು ಅಪರಾಧ ಕೃತ್ಯಗಳ ತನಿಖೆಗಾಗಿ ಸೃಷ್ಟಿ ಮಾಡಲಾಗಿದೆ.
ಇನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪ್ರಥಮ ಹಂತದಲ್ಲಿ ಒಟ್ಟು 206 ಜನ ನುರಿತ ಅಧಿಕಾರಿಗಳ ಹುದ್ದೆಗಳನ್ನು ಮಂಜೂರು ಮಾಡಿದ್ದಾರೆ. ಇನ್ನು ಶೀಘ್ರದಲ್ಲಿಯೇ ಈ ಹುದ್ದೆಗಳಿಗೆ ನೇಮಕಾತಿ ನಡೆಯುವ ಸಾಧ್ಯತೆಯಿದ್ದು, ಪೊಲೀಸ್ ಇಲಾಖೆ ಸೇರಬಯಸುವ ಸ್ಪರ್ಧಾರ್ಥಿಗಳಿಗೆ ಇಂದೊಂದು ಸುವರ್ಣಾವಕಾಶವಾಗಿದ್ದು, ಈ ಹುದ್ದೆಗಳ ಕುರಿತ ಸವಿವರವಾದ ಮಾಹಿತಿಯನ್ನು ಶೀಘ್ರದಲ್ಲೇ KPSC Vaani ಜಾಲತಾಣದಲ್ಲಿ ಪ್ರಕಟಿಸಲಾಗುವದು ನಿರೀಕ್ಷಿಸಿ
Comments