ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ ( KSRLPS ) 2025 ನೇ ಸಾಲಿನಲ್ಲಿ ಕ್ಲಸ್ಟರ್ ಸೂಪರ್‌ವೈಸರ್ ಮತ್ತು ಬ್ಲಾಕ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. KSRLPS ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 15, 2025 ಆಗಿದೆ.
ಹುದ್ದೆಗಳ ವಿವರ :
• ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ – 1
• ಕ್ಲಸ್ಟರ್ ಮೇಲ್ವಿಚಾರಕರು – 1
• ಬ್ಲಾಕ್ ಮ್ಯಾನೇಜರ್-ಫಾರ್ಮ್ ಲೈವ್ಲಿಹುಡ್ಸ್ – 1
ವಿದ್ಯಾರ್ಹತೆ : M.Sc. (Agri), B.Sc. (Agri) ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯಗಳಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ :
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ.
ಪ್ರಮುಖ ದಿನಾಂಕಗಳು :
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-04-2025
• ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-ಏಪ್ರಿಲ್ -2025
ಅಧಿಕೃತ ಅಧಿಸೂಚನೆ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ :
Comments