ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ KSRP ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ
18 ನವೆಂಬರ್ 2019
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 07 June 2019 ರಂದು ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‍ಟೇಬಲ್ (ಕೆ.ಎಸ್.ಆರ್.ಪಿ)(ಪುರುಷ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು, ಒಟ್ಟು 218 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಈ ನೇಮಕಾತಿಯ ಮೊದಲನೆ ಹಂತವಾದ ಲಿಖಿತ ಪರೀಕ್ಷೆಗಾಗಿ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ರಿಜಿಸ್ಟ್ರೇಷನ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ತಿಳಿಸಿರುವ ಸ್ಥಳ ಮತ್ತು ದಿನಾಂಕದಂದು ಕಡ್ಡಾಯವಾಗಿ ಹಾಜರಿರುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.