Loading..!

ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಮೀಸಲು ಪಡೆ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ನಿಯಮ ಬದಲಾವಣೆ
Published by: Basavaraj Halli | Date:15 ಮಾರ್ಚ್ 2020
Image not found
ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಮೀಸಲು ಪಡೆ (KSRP, CAR/DAR, IRB) ಯ ಪೊಲೀಸ್ ಕಾನ್ಸ್‌ಸ್ಟೇಬಲ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲ ಬದಲಾವಣೆಗಳನ್ನೂ ಮಾಡಿ ರಾಜ್ಯ ಮೀಸಲು ಪೊಲೀಸ್‌ (ವೃಂದ ಮತ್ತು ನೇಮಕಾತಿ) ನಿಯಮ-2020 ಎಂಬ ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಈ ಮೊದಲು ಮೀಸಲು ಪಡೆ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಡ್ಯ ಪರೀಕ್ಷೆ ನಡೆಸಿದ ಬಳಿಕ ಅರ್ಹತೆ ಪಡೆದವರಿಗೆ ಲಿಖೀತ ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಿ, ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ 1:5 ರ ಅನುಪಾತದಲ್ಲಿ ಸಹಿಷ್ಣುತೆ & ದೇಹದಾಢ್ಯತೆ ಪರೀಕ್ಷೆಗೆ ಆಹ್ವಾನಿಸಲಾಗುತ್ತಿದೆ.
ಈ ಬದಲಾವಣೆ ಉದ್ದೇಶದಿಂದ ಜಾರಿಗೆ ತರಲಾದ 'ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ನಿಯಮ - 2020' ಎಂಬ ಕರಡು ಅಧಿಸೂಚನೆ ಪ್ರಕಟಿಸಲಾಗಿದ್ದು ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದೆ. ಅನಂತರವಷ್ಟೇ ಅಧಿಕೃತವಾಗಿ ಪ್ರಕ್ರಿಯೆ ಜಾರಿಗೆ ಬರಲಿದೆ.

Comments

I As ಮಾರ್ಚ್ 17, 2020, 9:29 ಪೂರ್ವಾಹ್ನ