ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ KSRP ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ
15 ನವೆಂಬರ್ 2019
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕಳೆದ ಆಗಸ್ಟ್ 08, 2019 ರಂದು ಸುಮಾರು 40 KSRP ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿತ್ತು. ಪ್ರಸ್ತುತ, ಈ ನೇಮಕಾತಿಯ ಮೊದಲನೆ ಹಂತವಾದ ದೈಹಿಕ ಪರೀಕ್ಷೆಗಾಗಿ ಅಭ್ಯರ್ಥಿಗಳ ಕರೆ ಪತ್ರವನ್ನು ತನ್ನ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು ಅಭ್ಯರ್ಥಿಗಳು ಮೈ ಅಪ್ಲಿಕೇಷನ್ ವಿಭಾಗಕ್ಕೆ ಭೇಟಿ ನೀಡಿ ತಮ್ಮ ರಿಜಿಸ್ಟೇಷನ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ತಮ್ಮ ಕರೆಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಕಡ್ಡಾಯವಾಗಿ ದೈಹಿಕ ಪರೀಕ್ಷೆಗೆ ಹಾಜರಾಗುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಕರೆ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ