ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅಧಿಸೂಚಿಸಿದ ತಾಂತ್ರಿಕ ಸಹಾಯಕ ಮತ್ತು ಭದ್ರತಾ ರಕ್ಷಕ ಹುದ್ದೆಗಳ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅಧಿಸೂಚಿಸಿದ ತಾಂತ್ರಿಕ ಸಹಾಯಕ ಮತ್ತು ಭದ್ರತಾ ರಕ್ಷಕ ಹುದ್ದೆಗಳ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ
20 ಡಿಸೆಂಬರ್ 2019 BMTC/KSRTC
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 726 ತಾಂತ್ರಿಕ ಸಹಾಯಕ ಮತ್ತು 200 ಭದ್ರತಾ ರಕ್ಷಕ ದರ್ಜೆ-3 ಮೇಲ್ವಿಚಾರಕೇತರ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಿತ ಬೆಂಗಳೂರು. ಇವರು ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಈ ಕೆಳಗಿನ ವೇಳಾಪಟ್ಟಿಯಂತೆ ನಡೆಸಲು ತೀರ್ಮಾನ ಕೈಗೊಂಡಿರುತ್ತಾರೆ. ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಪರೀಕ್ಷೆಗಳು 02 ಫೆಬ್ರುವರಿ 2020 ರ ಭಾನುವಾರದಂದು ನಡೆಯಲಿ ನಡೆಯಲಿವೆ ಬೆಳಿಗ್ಗೆ 10:30 ರಿಂದ 12:30 ವರೆಗೆ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಅದೇ ದಿನ ಮಧ್ಯಾಹ್ನ ಭದ್ರತಾ ಸಹಾಯಕ ದರ್ಜೆ-3 ಹುದ್ದೆಗಳಿಗೆ 2:30 ರಿಂದ 4:30 ನಿಮಿಷದವರೆಗೆ ಪರೀಕ್ಷೆ ನಡೆಯಲಿದೆ * ಈ ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳಿದ್ದು ಅಭ್ಯರ್ಥಿಗಳು ಗಮನದಲ್ಲಿರಬೇಕು * ಪ್ರವೇಶ ಪತ್ರಗಳನ್ನು ಶೀಘ್ರದಲ್ಲಿಯೇ KEA ಜಾಲತಾಣದಲ್ಲಿ ಪ್ರಕಟಿಸಲಾಗುವದು ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ನಮ್ಮ ಜಾಲತಾಣವನ್ನು ವೀಕ್ಷಿಸುತ್ತಿರಬೇಕು.
Useful Links
to download official announcement
Official notification attachment
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.