KSRTC ನೇಮಕಾತಿಯ ತಾಂತ್ರಿಕ ಸಹಾಯಕ ಹಾಗೂ ಭದ್ರತಾ ರಕ್ಷಕ ಹುದ್ದೆಗಳ ಲಿಖಿತ ಪರೀಕ್ಷಾ ಪರೀಕ್ಷಾ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ಕುರಿತು ಮಾಹಿತಿ

KSRTC ನೇಮಕಾತಿಯ ತಾಂತ್ರಿಕ ಸಹಾಯಕ ಹಾಗೂ ಭದ್ರತಾ ರಕ್ಷಕ ಹುದ್ದೆಗಳ ಲಿಖಿತ ಪರೀಕ್ಷಾ ಪರೀಕ್ಷಾ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ಕುರಿತು ಮಾಹಿತಿ
Published by Basavaraj Halli
17 ಜನವರಿ 2020 BMTC/KSRTC
KSRTC ಯಲ್ಲಿನ ಮೇಲ್ವಿಚಾರಕೇತರ ವರ್ಗದ 726 ತಾಂತ್ರಿಕ ಸಹಾಯಕ ಹಾಗೂ 200 ಭದ್ರತಾ ರಕ್ಷಕ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ನೇರ ನೇಮಕಾತಿಗಾಗಿ 2018 ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗಿತ್ತು. ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಮುಖಾಂತರ ದಿನಾಂಕ 20/01/2020 ರ ಭಾನುವಾರದಂದು ಸಂಜೆ 4:00 ಗಂಟೆಗೆ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಹುದ್ದೆಗಳಿಗೆ ದಿನಾಂಕ 02/02/2020 ರ ಭಾನುವಾರ ಬೆಳಗ್ಗೆ 10 :30 ರಿಂದ 12:30 ರವರೆಗೆ ತಾಂತ್ರಿಕ ಸಹಾಯಕ ಹುದ್ದೆಗೆ ಮತ್ತು ಮಧ್ಯಾಹ್ನ 2:30 ರಿಂದ 4:30 ರವೆರೆಗೆ ಭದ್ರತಾ ರಕ್ಷಕ ಹುದ್ದೆಗೆ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪೌತ್ರ ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ KSRTC ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ. ಅಭ್ಯರ್ಥಿಗಳಿಗೆ ಈಗಾಗಲೇ SMS ಮೂಲಕ ಈ ಕುರಿತು ಸಂದೇಶ ರವಾನಿಸಲಾಗಿದೆ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್ ಅನ್ನು ಶೀಘ್ರದಲ್ಲೇ ಅಪ್ಲೋಡ್ ಮಾಡಲಾಗುವದು ನಿರೀಕ್ಷಿಸಿ.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.