ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ನೇಮಕಾತಿಗಾಗಿ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪತ್ರಗಳು ಪ್ರಕಟ
05 ಅಕ್ಟೋಬರ್ 2019
Karnataka Prison Department
Notification No.80/Rect-2/2018-2019 Dated: /12/2019
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕಾರಾಗೃಹಗಳ ಇಲಾಖೆಯಲ್ಲಿನ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆ ನಡೆಸಲಿದ್ದು, ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಇಲಾಖೆಯ ಜಾಲತಾಣದಲ್ಲಿ ಮೈ ಅಪ್ಲಿಕೇಶನ್ ವಿಭಾಗಕ್ಕೆ ಭೇಟಿ ನೀಡಿ ಅಪ್ಲಿಕೇಶನ್ ನಂಬರ್ ಹಾಗೂ ಜನ್ಮದಿನಾಂಕವನ್ನು ನಮೂದಿಸುವ ಮೂಲಕ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಹುದ್ದೆಗಳಿಗೆ ಕಳೆದ ತಿಂಗಳ 16ರಿಂದ ದೇಹದಾರ್ಢ್ಯತೆ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ನಡೆಸಲಾಗಿತ್ತು, ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಒಟ್ಟು 12 ಜೈಲರ್ ಮತ್ತು 650 ವಾರ್ಡರ್ ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು ಫೆಬ್ರುವರಿ ತಿಂಗಳಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿತ್ತು. ವಾರ್ಡೆರ್ ಹುದ್ದೆಗಳಿಗೆ ಅರ್ಹತಾ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಯಲ್ಲಿನ ಅಂಕಗಳ ಆಧಾರದಲ್ಲಿ ನೇಮಕ ಪ್ರಕ್ರಿಯೆ ನಡೆಯಲಿದೆ, ಜೈಲರ್ ಹುದ್ದೆಗಳಿಗೆ ಸಂದರ್ಶನ ನಡೆಯಲಿದ್ದು ಇದರಲ್ಲಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.