ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
01 ಫೆಬ್ರವರಿ 2025 Others

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ದಲ್ಲಿ ಖಾಲಿ ಇರುವ 4 ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11 ಫೆಬ್ರವರಿ 2025 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಅರ್ಹತೆ : 
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಭ್ಯರ್ಥಿಯ ಗರಿಷ್ಠ ವಯಸ್ಸು 11-02-2025 ರಂತೆ 40 ವರ್ಷಗಳನ್ನು ಹೊಂದಿರಬೇಕು.

ವೇತನ ಶ್ರೇಣಿ:
ಮಾಸಿಕ ₹1,41,000/- ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್‌‌‌ https://nhai.gov.in/#/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಪ್ರಾಜೆಕ್ಟ್ ಮ್ಯಾನೇಜರ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ‌‌ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌

ಅರ್ಜಿ ಸಲ್ಲಿಸುವ ವಿಧಾನ : 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ‌‌ ‌ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌
ವಿಳಾಸ:
hr.nhipmpl@nhai.org 

ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 30-01-2025
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 11-02-2025
ಉದ್ಯೋಗ ಸ್ಥಳ: ಅಖಿಲ ಭಾರತ

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.