ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
02 ಏಪ್ರಿಲ್ 2025 Others

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS) ಇಲ್ಲಿ ಖಾಲಿ ಇರುವ  ಪ್ರಾಜೆಕ್ಟ್ ಸಂಶೋಧನಾ ವಿಜ್ಞಾನಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸ್ನಾತಕೋತ್ತರ ಪದವಿಯನ್ನು  ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಭ್ಯರ್ಥಿಯು ಗರಿಷ್ಠ ವಯಸ್ಸು 35 ವರ್ಷಗಳನ್ನು ಹೊಂದಿರಬೇಕು.

ಅರ್ಜಿಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನ ಶ್ರೇಣಿ:
ಮಾಸಿಕ ₹56,000/- ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ/ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್‌‌‌ https://www.nimhans.ac.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ NIMHANS ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ  ಪ್ರಾಜೆಕ್ಟ್ ಸಂಶೋಧನಾ ವಿಜ್ಞಾನಿ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ‌ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಅಧಿಸೂಚನೆಯಲ್ಲಿ ತಿಳಿಸಲಾದ ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನದ ವಿಳಾಸ:
Exam Hall, Fourth Floor, NBRC, NIMHANS, Bengaluru-29

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 01-04-2025
ವಾಕ್-ಇನ್ ದಿನಾಂಕ: 17-04-2025 ಬೆಳಿಗ್ಗೆ 10:00 ಕ್ಕೆ

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.