Others 02 ಜುಲೈ 2025 1 year ago
Published by Yallamma G

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 2025ನೇ ಸಾಲಿನ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಿದೆ. ಈ  ಅಧಿಸೂಚನೆಯ ಮೂಲಕ ತಾಂತ್ರಿಕ ಅಧಿಕಾರಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ  ದಿನಾಂಕ 11-ಜುಲೈ-2025ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಈ ಹುದ್ದೆಯನ್ನು ಒಂದು ವರ್ಷದ ಅವಧಿಯ ವರೆಗೆ ನೇಮಕಮಾಡಿಕೊಳ್ಳಲಾಗುತ್ತದೆ. 

ಶೈಕ್ಷಣಿಕ ಅರ್ಹತೆ : NIMHANS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪದವಿಯನ್ನು ಪೂರ್ಣಗೊಳಿಸಿರಬೇಕು. 

ವಯಸ್ಸಿನ ಮಿತಿ: ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರವಾಗಿ ಗರಿಷ್ಠ 35 ವರ್ಷಗಳ ವಯಸ್ಸನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಮಾನದಂಡಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರಲಿದೆ.

ಆಯ್ಕೆ ಪ್ರಕ್ರಿಯೆ : 
ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. 

ಸಂದರ್ಶನದ ವಿಳಾಸ : 
ಸಂದರ್ಶನ ನಡೆಯುವ ದಿನಾಂಕ : 11/07/2025 ಬೆಳಿಗ್ಗೆ 10:00 ಕ್ಕೆ

ಸಂದರ್ಶನ ನಡೆಯುವ ಸ್ಥಳ : 4 ನೇ ಮಹಡಿ NBRC ಕಟ್ಟಡ, ಆಡಳಿತಾತ್ಮಕ ಬ್ಲಾಕ್, ನಿಮ್ಹಾನ್ಸ್, ಬೆಂಗಳೂರು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.