ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ಖಾಲಿ ಇರುವ ಡೇಟಾ ಎಂಟ್ರಿ ಕಲೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
ವಿದ್ಯಾರ್ಹತೆ :
ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ : ಗರಿಷ್ಠ 40 ವರ್ಷಗಳು
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 45,000ರೂ. ವೇತನ ನಿಗದಿಪಡಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಸೂಚನೆಯಲ್ಲಿ ತಿಳಿಸಿರುವಂತೆ) Board Room, NBRC 1st Floor, Opposite Library & Information Centre, NIMHANS, Bengaluru- 29 ವಿಳಾಸಕ್ಕೆ ಸಂದರ್ಶನಕ್ಕೆ ಮಾ.10ರಂದು ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Comments