ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮ (NSFDC) ನೇಮಕಾತಿ 2025: ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:18 ಮಾರ್ಚ್ 2025
Image not found

ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮ (NSFDC) ದಲ್ಲಿ ಖಾಲಿ ಇರುವ 4 ಅಸಿಸ್ಟಂಟ್ ಜನರಲ್ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್, ಮತ್ತು ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025 ಏಪ್ರಿಲ್ 13ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.


ಹುದ್ದೆಗಳ ವಿವರ :
* ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಹುದ್ದೆ : 1 

ವಿದ್ಯಾರ್ಹತೆ: ಸಂಬಂಧಿತ ಕ್ಷೇತ್ರದಲ್ಲಿ ಪದವಿ
ವೇತನ ಶ್ರೇಣಿ: ರೂ. 70,000 – 2,00,000
ಗರಿಷ್ಠ ವಯೋಮಿತಿ: 42 ವರ್ಷ


* ಅಸಿಸ್ಟಂಟ್ ಮ್ಯಾನೇಜರ್: 1 ಹುದ್ದೆ
ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯೂಎ, ಬಿ.ಕಾಂ, ಎಂ.ಕಾಂ
ವೇತನ ಶ್ರೇಣಿ: ರೂ. 30,000 – 1,20,000
ಗರಿಷ್ಠ ವಯೋಮಿತಿ: 30 ವರ್ಷ


* ಜೂನಿಯರ್ ಎಕ್ಸಿಕ್ಯೂಟಿವ್: 2 ಹುದ್ದೆಗಳು
ವಿದ್ಯಾರ್ಹತೆ: ಪದವಿ ಅಥವಾ ಸ್ನಾತಕೋತ್ತರ ಪದವಿ
ವೇತನ ಶ್ರೇಣಿ: ರೂ. 26,000 – 93,000
ಗರಿಷ್ಠ ವಯೋಮಿತಿ: 28 ವರ್ಷ


ವಯೋಮಿತಿಯಲ್ಲಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷ
ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ: 13 ವರ್ಷ
ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ: 15 ವರ್ಷ


ಅರ್ಜಿ ಶುಲ್ಕ:
- ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ:

ಎಸ್‌ಸಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ರೂ. 600


- ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ:
ಎಸ್‌ಸಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ರೂ. 200

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವ ವಿಧಾನ:
- NSFDC ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆಗಳನ್ನು ಪರಿಶೀಲಿಸಿ.
- ಅರ್ಜಿ ಸಲ್ಲಿಸುವ ಮೊದಲು, ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿಸಿ.
- ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ (ವಯಸ್ಸು, ವಿದ್ಯಾರ್ಹತೆ, ಅನುಭವ ಇತ್ಯಾದಿ).
- NSFDC ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿ.
- ಅಗತ್ಯ ದಾಖಲೆಗಳನ್ನು ಸ್ಕಾನ್ ಮಾಡಿ ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ, ಅರ್ಜಿ ಸಂಖ್ಯೆಯನ್ನು ಸಂರಕ್ಷಿಸಿ.


ಪ್ರಮುಖ ದಿನಾಂಕಗಳು:
# ಆನ್‌ಲೈನ್ ಅರ್ಜಿ ಸಲ್ಲಿಕ ಆರಂಭ ದಿನಾಂಕ: 2025 ಮಾರ್ಚ್ 15
# ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 2025 ಏಪ್ರಿಲ್ 13
# ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ: 2025 ಏಪ್ರಿಲ್ 28
# ಆನ್‌ಲೈನ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 2025 ಮೇ/ಜೂನ್


ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಗಾಗಿ, NSFDC ಅಧಿಕೃತ ವೆಬ್‌ಸೈಟ್ (nsfdc.nic.in) ಗೆ ಭೇಟಿ ನೀಡಿ.

Comments

*