Loading..!

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:17 ಫೆಬ್ರುವರಿ 2025
Image not found

ಭಾರತದ ಖ್ಯಾತ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಸಂಸ್ಥೆಯು 2025 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು09 ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು DGM ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ ನಂತರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಕನಿಷ್ಠ ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2025 ಮಾರ್ಚ್ 1 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 09
DGM (E7 Level) : 1
Manager (E5 Level) : 2
Deputy Manager (E4 Level) : 1
Assistant Manager (E3 Level) : 2
Executive on Fixed Term Basis : 3


ಗರಿಷ್ಠ ವಯೋಮಿತಿ : 
ಡಿಜಿಎಂ (E7 ಲೆವೆಲ್) : 47
ಮ್ಯಾನೇಜರ್ (E5 ಲೆವೆಲ್) : 42
ಡೆಪ್ಯೂಟಿ ಮ್ಯಾನೇಜರ್ (E4 ಲೆವೆಲ್) : 40
ಅಸಿಸ್ಟೆಂಟ್ ಮ್ಯಾನೇಜರ್ (E3 ಲೆವೆಲ್) : 37
ಫಿಕ್ಸ್ಡ್ ಟರ್ಮ್ ಆಧಾರದ ಮೇಲೆ ಎಕ್ಸಿಕ್ಯೂಟಿವ್ : 35


ವಯೋಮಿತಿ ಸಡಿಲಿಕೆ:
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
ಒಬಿಸಿ-ಎನ್‌ಸಿಎಲ್ ಅಭ್ಯರ್ಥಿಗಳಿಗೆ: 3 ವರ್ಷ
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: 10 ವರ್ಷ


ಮಾಸಿಕ ವೇತನ : 
DGM (E7 Level) : Rs.90000-240000/-
Manager (E5 Level), Deputy Manager (E4 Level) : Rs.70000-200000/-
Assistant Manager (E3 Level) : Rs.60000-180000/-
Executive on Fixed Term Basis : Rs.90000/-


ಅಪ್ಲಿಕೇಶನ್ ಶುಲ್ಕ:
ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ. 300/-
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ/ಮಹಿಳಾ/ಎಕ್ಸ್‌ಎಸ್‌ಎಮ್ ಅಭ್ಯರ್ಥಿಗಳು: ಶುಲ್ಕವಿಲ್ಲ


ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟಿಂಗ್, ಲಿಖಿತ/ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.


ಅರ್ಜಿಯ ವಿಧಾನ:
- ಎನ್‌ಟಿಪಿಸಿ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆಗಳನ್ನು ಪರಿಶೀಲಿಸಿ.
- ಆನ್‌ಲೈನ್ ಅರ್ಜಿಯನ್ನು ಭರ್ತಿಗೆ ಮುನ್ನ, ಮಾನ್ಯ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಸಿದ್ಧವಾಗಿಡಿ.
- ಕೆಳಗಿನ ಲಿಂಕ್ ಮೂಲಕ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಿ:
- ಅಗತ್ಯವಿರುವ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಮತ್ತು ಇತ್ತೀಚಿನ ಪಾಸ್ಪೋರ್ಟ್ ಗಾತ್ರದ ಫೋಟೋವನ್ನು ಅಪ್ಲೋಡ್ ಮಾಡಿ.
- ಅಪ್ಲಿಕೇಶನ್ ಶುಲ್ಕವನ್ನು ನಿಮ್ಮ ವರ್ಗದ ಪ್ರಕಾರ ಪಾವತಿಸಿ.
- ಅಂತಿಮವಾಗಿ ಸಲ್ಲಿಸಿ ಬಟನ್ ಕ್ಲಿಕ್ ಮಾಡಿ ಮತ್ತು ಅರ್ಜಿಯ ಸಂಖ್ಯೆಯನ್ನು ಭವಿಷ್ಯದಲ್ಲಿ ಉಲ್ಲೇಖಿಸಲು ಸಂಗ್ರಹಿಸಿ.


ಮುಖ್ಯ ದಿನಾಂಕಗಳು:
ಆನ್‌ಲೈನ್ ಅರ್ಜಿಯನ್ನು ಪ್ರಾರಂಭಿಸಿದ ದಿನಾಂಕ: 2025 ಫೆಬ್ರವರಿ 15
ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 2025 ಮಾರ್ಚ್ 1

Comments