Loading..!

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ IAS KAS ಮತ್ತು ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿಯ ಸ್ವರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| Date:14 ಜುಲೈ 2019
Image not found
IAS KAS ಮತ್ತು ಬ್ಯಾಂಕಿಂಗ್ ಪ್ರೊಬೆಟಿನರಿ ಆಫೀಸರ್ಸ್ ಹುದ್ದೆಗಳ ನೇಮಕಾತಿಯ ಸ್ವರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20 ಉಚಿತ ಸ್ವರ್ಧಾತ್ಮಕ ಪರೀಕ್ಷೆಗಳ ತರಬೇತಿ ನಡೆಸುತ್ತಿದ್ದು. ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2A, 2B, 3A, 3B ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ಪರಿಶೀಲಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ : 17-07-2019
ಗಮನಿಸಿ: ಈ ತರಬೇತಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವದಿಲ್ಲ.

ಅರ್ಹತೆಗಳು:
1.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಅಭ್ಯರ್ಥಿಯು ಐ.ಎ.ಎಸ್, ಕೆ.ಎ.ಎಸ್ ಅಥವಾ ಬ್ಯಾಂಕ್ ಪ್ರೊಬೇಷನರ್ ಆಫೀಸರ್ಸ್ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಳಲ್ಲಿ ಯಾವುದಾರೊಂದಕ್ಕೆ ಒಂದು ಬಾರಿ ಮಾತ್ರ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯಬಹುದು.
2.ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಅಥವಾ 3(ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳು online ಮೂಲಕ ಅರ್ಜಿಗಳನ್ನು ಸಲ್ಲಿಸುವುದು.
3.ಅಭ್ಯರ್ಥಿಯ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ 1 ರ ಅಭ್ಯರ್ಥಿಗಳಿಗೆ ರೂ.4.50 ಲಕ್ಷ ಹಾಗೂ ಪ್ರವರ್ಗ 2(ಎ),
3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ ರೂ.3.50 ಲಕ್ಷಗಳು.
4.ಅಭ್ಯರ್ಥಿಯು ಸಕ್ಷಮ ಪ್ರಾಧಿಕಾರದಿಂದ ಪಡೆದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು.
5.ಅಭ್ಯರ್ಥಿಯು ಯಾವುದಾದರೊಂದು ಅಂಗೀಕೃತ ವಿಶ್ವವಿದ್ಯಾಲಯದ ಪದವೀಧರನಾಗಿರಬೇಕು ಅಥವಾ ಕೇಂದ್ರ ಲೋಕಸೇವಾ ಆಯೋಗ/ಕರ್ನಾಟಕ ಲೋಕಸೇವಾ ಆಯೋಗ/ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು (ಬ್ಯಾಂಕ್) ಕೋರುವ ಷರತ್ತಿಗೊಳಪಟ್ಟಿರಬೇಕು.
6.ಅಭ್ಯರ್ಥಿಯ ವಯೋಮಿತಿ ಕನಿಷ್ಠ 21 ವರ್ಷ ವಯಸ್ಸಿನವರಾಗಿರಬೇಕು.
7.ಕೇಂದ್ರ/ರಾಜ್ಯ ಸರ್ಕಾರದ/ಅನುದಾನಿತ ಸಂಸ್ಥೆಗಳ/ಸಾರ್ವಜನಿಕ ಸ್ವಾಮ್ಯತೆಗೆ ಒಳಪಟ್ಟ ಸಂಸ್ಥೆಗಳಲ್ಲಿನ ನೌಕರರು ಅರ್ಜಿ ಸಲ್ಲಿಸಲು ಮತ್ತು ತರಬೇತಿ ಪಡೆಯಲು ಅರ್ಹರಲ್ಲ.
8.ತರಬೇತಿ ಶುಲ್ಕವನ್ನು ಇಲಾಖೆಯಿಂದಲೇ ತರಬೇತಿ ಸಂಸ್ಥೆಗೆ ಪಾವತಿಸಲಾಗುವುದು.
9.ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಸಂಸ್ಥೆಯಿಂದ ಒಂದು ಸೆಟ್ ಕೋರ್ಸ್ ಮೆಟೀರಿಯಲ್ ಅನ್ನು ನೀಡಲಾಗುವುದು.
10. ಐ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಸ್ವಂತ ಸ್ಥಳದಿಂದ ತರಬೇತಿ ಸಂಸ್ಥೆ ಇರುವ ಸ್ಥಳಕ್ಕೆ ಒಂದು ಬಾರಿ ಹೋಗಿ ಬರಲು ದ್ವಿತೀಯ ದರ್ಜೆ ರೈಲ್ವೆ (ಸ್ಲೀಪರ್) ಪ್ರಯಾಣ ಭತ್ಯೆ ನೀಡಲಾಗುವುದು.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ:
1.ದಿನಪತ್ರಿಕೆಗಳು/ವೆಬ್‍ಸೈಟ್ ಮುಖಾಂತರ ವ್ಯಾಪಕ ಪ್ರಚಾರವನ್ನು ನೀಡಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗುವುದು.
2.ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಏರ್ಪಡಿಸಲಾಗುವುದು ಹಾಗೂ ಲಿಖಿತ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳು, ಪ್ರವರ್ಗವಾರು ಮೀಸಲಾತಿ,ವಿವಿಧ ಸಂಸ್ಥೆಗಳಲ್ಲಿ ಲಭ್ಯವಿರುವ ಹಾಗೂ ಈ ಸಂಸ್ಥೆಗಳಿಗೆ ಸರ್ಕಾರ ನಿಗದಿಪಡಿಸುವ ಸಂಖ್ಯೆ ಗಳಿಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಅವರ ಮೂಲ ದಾಖಲೆಗಳ ಪರಿಶೀಲನೆ ಮಾಡಿದ ನಂತರ ತರಬೇತಿಗಾಗಿ ಕೌನ್ಸಿ-ಲಿಂಗ್ ಮೂಲಕ ವಿವಿಧ ತರಬೇತಿ ಸಂಸ್ಥೆಗಳಿಗೆ ನಿಯೋಜಿಸಲಾಗುವುದು.
3.ಲಿಖಿತ ಪರೀಕ್ಷೆಯು ಇಂಗ್ಲೀಷ್, ಸಾಮಾನ್ಯ ಜ್ಞಾನ ಮತ್ತು ಗಣಿತ ಇತ್ಯಾದಿ ವಿಷಯಗಳನ್ನು ಒಳಗೊಂಡಿರುತ್ತದೆ. ತರಬೇತಿಗೆ ಆಯ್ಕೆಯಾಗಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಸರ್ಕಾರದ ವತಿಯಿಂದ ನೀಡುವ ಸೌಲಭ್ಯಗಳು:
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments