ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 420 ಕಲ್ಯಾಣ ಕರ್ನಾಟಕದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (PC - CAR / DAR ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಸ್ತುತ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಯ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯನ್ನು ದಿನಾಂಕ 10 ಸೆಪ್ಟೆಂಬರ್ 2023 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಇಲಾಖೆಯು ತನ್ನ ಜಾಲತಾಣದಲ್ಲಿ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 420 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಯ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ
Published by Bhagya R K
06 ಡಿಸೆಂಬರ್ 2023
Others