Loading..!

ಸುಮಾರು 16,838 ರಾಜ್ಯ ಪೊಲೀಸ್ ಹುದ್ದೆಗಳ ಭರ್ತಿಗೆ ಹೈ-ಕೋರ್ಟ್ ನಿಂದ ಸೂಚನೆ ಈ ಕುರಿತ ಮಾಹಿತಿ ನಿಮಗಾಗಿ
| Date:26 ಜುಲೈ 2019
Image not found
ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 16,838 ಹುದ್ದೆಗಳನ್ನು ಈ ವರ್ಷಾಂತ್ಯದೊಳಗೆ ಭರ್ತಿ ಮಾಡಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಸುಪ್ರೀಂಕೋರ್ಟ್ ಆದೇಶದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ಸಿಜೆ(CJ) ಎ.ಯಸ್.ಓಕ್ ಹಾಗು ನ್ಯಾ ಎಚ್ ಟಿ ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸರಕಾರದಿಂದ ಮಾಹಿತಿ ಪಡೆದ ಬಳಿಕ ನ್ಯಾಯಾಲಯ ಎಲ್ಲ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕಾಲಮಿತಿ ನಿಗದಿಪಡಿಸಿತಲ್ಲದೆ, ಹಾಲಿ ರಾಜ್ಯದಲ್ಲಿರುವ ಜನಸಂಖ್ಯೆಗೆ ಅನುಗುಣವಾಗಿ ಎಷ್ಟು ಪೊಲೀಸರ ಅವಶ್ಯಕತೆ ಇದೆ ಎಂದು ಅಧ್ಯಯನ ನಡೆಸಿ ಆ ಬಗ್ಗೆ ವರದಿಯನ್ನು ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದೆ.
ಸರಕಾರದ ಪರ ಮೆಮೊ ಸಲ್ಲಿಸಿದ ವಕೀಲ ಡಿ. ನಾಗರಾಜ್ ಗೃಹ ಇಲಾಖೆ ನೀಡಿರುವ ಮಾಹಿತಿಯಂತೆ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಒಟ್ಟು 65,214 ಮಂಜೂರಾದ ಹುದ್ದೆಗಳಿವೆ. ಆ ಪೈಕಿ 48,376 ಹುದ್ದೆಗಳು ಭರ್ತಿಯಾಗಿವೆ, ಇನ್ನು 16,838 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳಲ್ಲಿ 9,146 ಪೊಲೀಸ್ ಕಾನ್ಸ್ಟೇಬಲ್ ಶ್ರೇಣಿಯವು ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಪೊಲೀಸ್ ಹುದ್ದೆಯ ಆಕಾಂಕ್ಷಿಗಳು ಈ ಹೈಕೋರ್ಟ್ ನ ಆದೇಶವನ್ನು ಗಮನದಲ್ಲಿರಿಸಿಕೊಂಡು ಉತ್ತಮ ತಯಾರಿಯನ್ನು ಈಗಿನಿಂದಲೇ ಆರಂಭಿಸಿ ಮತ್ತು ಯಶಸ್ವಿಯಾಗಿ. ಮತ್ತು ನಮ್ಮ ಜಾಲತಾಣದಲ್ಲಿರುವ ಪೊಲೀಸ್ ಇಲಾಖೆಯ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಂಡು ಉತ್ತಮ ತಯಾರಿ ನಡೆಸಿ.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments