ಸುಮಾರು 16,838 ರಾಜ್ಯ ಪೊಲೀಸ್ ಹುದ್ದೆಗಳ ಭರ್ತಿಗೆ ಹೈ-ಕೋರ್ಟ್ ನಿಂದ ಸೂಚನೆ ಈ ಕುರಿತ ಮಾಹಿತಿ ನಿಮಗಾಗಿ

ಸುಮಾರು 16,838 ರಾಜ್ಯ ಪೊಲೀಸ್ ಹುದ್ದೆಗಳ ಭರ್ತಿಗೆ ಹೈ-ಕೋರ್ಟ್ ನಿಂದ ಸೂಚನೆ ಈ ಕುರಿತ ಮಾಹಿತಿ ನಿಮಗಾಗಿ
22 ಜುಲೈ 2019 District Court
ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 16,838 ಹುದ್ದೆಗಳನ್ನು ಈ ವರ್ಷಾಂತ್ಯದೊಳಗೆ ಭರ್ತಿ ಮಾಡಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಸುಪ್ರೀಂಕೋರ್ಟ್ ಆದೇಶದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ಸಿಜೆ(CJ) ಎ.ಯಸ್.ಓಕ್ ಹಾಗು ನ್ಯಾ ಎಚ್ ಟಿ ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸರಕಾರದಿಂದ ಮಾಹಿತಿ ಪಡೆದ ಬಳಿಕ ನ್ಯಾಯಾಲಯ ಎಲ್ಲ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕಾಲಮಿತಿ ನಿಗದಿಪಡಿಸಿತಲ್ಲದೆ, ಹಾಲಿ ರಾಜ್ಯದಲ್ಲಿರುವ ಜನಸಂಖ್ಯೆಗೆ ಅನುಗುಣವಾಗಿ ಎಷ್ಟು ಪೊಲೀಸರ ಅವಶ್ಯಕತೆ ಇದೆ ಎಂದು ಅಧ್ಯಯನ ನಡೆಸಿ ಆ ಬಗ್ಗೆ ವರದಿಯನ್ನು ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದೆ. ಸರಕಾರದ ಪರ ಮೆಮೊ ಸಲ್ಲಿಸಿದ ವಕೀಲ ಡಿ. ನಾಗರಾಜ್ ಗೃಹ ಇಲಾಖೆ ನೀಡಿರುವ ಮಾಹಿತಿಯಂತೆ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಒಟ್ಟು 65,214 ಮಂಜೂರಾದ ಹುದ್ದೆಗಳಿವೆ. ಆ ಪೈಕಿ 48,376 ಹುದ್ದೆಗಳು ಭರ್ತಿಯಾಗಿವೆ, ಇನ್ನು 16,838 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳಲ್ಲಿ 9,146 ಪೊಲೀಸ್ ಕಾನ್ಸ್ಟೇಬಲ್ ಶ್ರೇಣಿಯವು ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಪೊಲೀಸ್ ಹುದ್ದೆಯ ಆಕಾಂಕ್ಷಿಗಳು ಈ ಹೈಕೋರ್ಟ್ ನ ಆದೇಶವನ್ನು ಗಮನದಲ್ಲಿರಿಸಿಕೊಂಡು ಉತ್ತಮ ತಯಾರಿಯನ್ನು ಈಗಿನಿಂದಲೇ ಆರಂಭಿಸಿ ಮತ್ತು ಯಶಸ್ವಿಯಾಗಿ. ಮತ್ತು ನಮ್ಮ ಜಾಲತಾಣದಲ್ಲಿರುವ ಪೊಲೀಸ್ ಇಲಾಖೆಯ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಂಡು ಉತ್ತಮ ತಯಾರಿ ನಡೆಸಿ.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.